Home ಜಿಲ್ಲೆ ತುಮಕೂರು ಎಂಪ್ರೆಸ್ ಕೆಪಿಎಸ್ ಶಾಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಎಂಪ್ರೆಸ್ ಕೆಪಿಎಸ್ ಶಾಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ತುಮಕೂರು, ಆ. ೨೨- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಮತ್ತು ಸದಸ್ಯರು ಜಿಲ್ಲಾಸ್ಪತ್ರೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಭೇಟಿ ನೀಡಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ಕುರಿತು ಪರಿಶೀಲಿಸಿದರು.


ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಸ್ಕೂಲ್, ತುಮಕೂರು ಇಲ್ಲಿಗೆ ಭೇಟಿ ನೀಡಿ ಶಾಲಾ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಶಾಲೆಯ ಸ್ವಚ್ಛತೆ, ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆ ಕಾಪಾಡುವಂತೆ ಅಲ್ಲಿನ ಶಾಲಾ ಶಿಕ್ಷಕರು ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು ಎಂದು ಆಯೋಗದ ಅಧ್ಯಕ್ಷರು ತಿಳಿಸಿದರು.


ನಂತರ ಶಾಲೆಯ ಅಡುಗೆ ಕೋಣೆಗೆ ಭೇಟಿ ನೀಡಿ ಅಡುಗೆ ಕೋಣೆಯ ಸ್ವಚ್ಛತೆಯನ್ನು ಹಾಗೂ ಗುಣಮಟ್ಟವನ್ನು ಕಾಪಾಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ತಿಳಿಸಿ, ಮಕ್ಕಳ ರಕ್ಷಣೆಯಲ್ಲಿ ನಿರ್ಲಕ್ಷ್ಯ ವಹಿಸದಂತೆ ಕ್ರಮ ವಹಿಸಲು ತಿಳಿಸಿದರು.


ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ರಾಧ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಘುಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಘುಚಂದ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ ಆರ್.ಜಿ. ಹಾಗೂ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು, ಸಿಂಡಿಕೇಟ್ ಸದಸ್ಯ ಶ್ರೇಯಾಂಕ್ ಹೆಚ್.ವಿ. ಪಾಲ್ಗೊಂಡಿದ್ದರು.