
ಧಾರವಾಡ, ಜ.೭: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ ಹಿನ್ನಲೆಯಲ್ಲಿ ವಾಸ್ತವಿಕ ಪರಿಸ್ಥಿತಿಯನ್ನು ಅವಲೋಕಿಸಿದರು.
ದಲಿತ ಕುಟುಂಬಗಳು ವಾಸಿಸುವ ಓಣಿ ಹಾಗೂ ದೌರ್ಜನ್ಯಕ್ಕೆ ಒಳಗಾದ ವಿವೇಕಾನಂದ ಅವರ ಮನೆ ಹಾಗೂ ದೌರ್ಜನ್ಯ ಮತ್ತು ಕೊಲೆ ಕೃತ್ಯ ನಡೆದ ಸ್ಥಳ ಪರಿಶೀಲಿಸಿ, ಸ್ಥಳೀಯ ನಿವಾಸಿಗಳಿಂದ, ಪೊಲೀಸ್ ಅಧಿಕಾರಿಗಳಿಂದ ಹಾಗೂ ಇತರರಿಂದ ವಿವರವಾದ ಮಾಹಿತಿಯನ್ನು ಅವರು ಪಡೆದುಕೊಂಡರು.
ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಸಂಬAಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಯೋಗದಿಂದ ಸರ್ಕಾರ ಹಾಗೂ ಸಂಬAಧಪಟ್ಟ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಮತ್ತು ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.
























