ಮತ ಕಳವು:ಪುರಾವೆ ಇದೆ

ನವದೆಹಲಿ, ಆ.೨- ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು ಈ ಬಗ್ಗೆ ನಮ್ಮ ಬಳಿ ಪುರಾವೆ ಇದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಭಾರತದಲ್ಲಿ ಚುನಾವಣಾ ಆಯೋಗ ಸತ್ತುಹೋಗಿದೆ”.ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದೆ. ಸ್ವತಂತ್ರವಾಗಿ ಕೆಲಸ ಮಾಡಲು ಇನ್ನು ಮುಂದೆ ಸಾದ್ಯವೇ ಇಲ್ಲ ಎಂದು ಗುಡುಗಿದ್ದಾರೆ

ದೆಹಕಲಿಯಲ್ಲಿ ನಡೆದ ಕಾಂಗ್ರೆಸ್ ಕಾನೂನು ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಒಂದು ಕ್ಷೇತ್ರದಲ್ಲಿ ೧.೫ ಲಕ್ಷ ನಕಲಿ ಮತದಾರರಿದ್ದಾರೆ ಎನ್ನುವ ಮಾಹಿತಿ ನಮ್ಮ ಬಳಿ ಇದೆ ಎಂದು ತಿಳಿಸಿದ್ದಾರೆ

ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇನ್ನು ಮುಂದೆಯೂ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾದ್ಯವಿಲ್ಲದಂತಾಗಿದೆ ಎಂದು ಹರಿಹಾಯ್ದಿದ್ದ ಅವರು “ಲೋಕಸಭಾ ಚುನಾವಣೆಯಲ್ಲಿ ವಂಚನೆ ಮಾಡಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ

ಒಂದು ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಮತದಾರರ ಪಟ್ಟಿಯನ್ನು ಪರಿಶೀಲಿಸಿದಾಗ ೬.೫ ಲಕ್ಷ ಮತದಾರರಲ್ಲಿ ೧.೫ ಲಕ್ಷ ಮತದಾರರು ನಕಲಿ ಎಂದು ಕಂಡುಬಂದಿದೆ ಎಂದು ತಿಳಿಸಿದ ಅವರು ಆಡಳಿತಾರೂಢ ಬಿಜೆಪಿಯ ಬಹುಮತ ಪಡೆಯಲು ವಂಚನೆ ನಡೆಸಿದೆ ಎಂದು ದೂರಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ೧೫ ರಿಂದ ೨೦ ಸ್ಥಾನ ಕಡಿಮೆ ಪಡೆದಿದ್ದರೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಿರಲಿಲ್ಲ ಇದರ ಹಿಂದೆ ಚುನಾವಣಾ ಆಯೋಗದ ಕರಿನೆರಳು ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

೨೦೧೪ ರಿಂದಲೂ ಏನೋ ತಪ್ಪಾಗಿದೆ ಎಂಬ ಅನುಮಾನ ನನಗೆ ಯಾವಾಗಲೂ ಇತ್ತು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಾರಿ ಬಹುಮತದಿಂದ ಬಿಜೆಪಿ ಗೆದ್ದಾಗಲೇ ಅನುಮಾನವಿತ್ತು. . ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸ್ಥಾನ ಬರಲಿಲ್ಲ ಎಂದಾಗ ಮತ್ತೊಮ್ಮೆ ಆಶ್ವರ್ಯವಾಗಿತ್ತು ಎಂದು ತಿಳಿಸಿದ್ದಾರೆ