ಮತದಾರರ ಜಾಗೃತಿ ಆಂದೋಲನ

ಕಲಬುರಗಿ,ಜೂ.10: ನಗರದ ಹೈಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿಯಿಂದ ನನ್ನ ಮತ ಮಾರಾಟಕ್ಕಿಲ್ಲ -ಮತದಾರರ ಜಾಗೃತಿ ಆಂದೋಲನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ, ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿಯ ಸಂಸ್ಥಾಪಕ ರಮೇಶ ಆರ್ ದುತ್ತರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲರಾದ ಡಾ.ಜಯಶ್ರೀ ಮುದ್ದಾ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನವೀನ ಕಾರಭಾರಿ ಮಾತನಾಡುತ್ತಾ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಪ್ರತಿಯೊಂದು ಚುನಾವಣೆಗಳು ಮುಕ್ತ ಹಾಗೂ ಪಾರದರ್ಶಕವಾಗಿ ನಡೆದಾಗ ಮಾತ್ರ ಬ್ರಷ್ಟಾಚಾರ ನಿಯಂತ್ರಣವಾಗುತ್ತದೆ ಮತ್ತು ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ ಎಂದರು. ಸಹಾಯಕ ಪ್ರಾಧ್ಯಾಪಕ ಡಾ. ಸುಭಾಷ್ ಪಾಟೀಲ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಸುವರ್ಣಾ ಬಿರಾದರ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.