
ಕಲಬುರಗಿ,ನ.04: ಅಕ್ಟೋಬರ್ 31ರಂದು ಕಲಬುರಗಿ ಕೆ.ಸಿ.ಟಿ. ಔಷಧ ಮಹಾವಿದ್ಯಾಲಯದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಮತ್ತು ಕಡ್ಡಾಯವಾಗಿ ಮತದಾನ ಮಾಡಲು ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವಿಪ್ ಸಮಿತಿ ಅಧ್ಯಕ್ಷರಾದ ಭಂವರ್ ಸಿಂಗ್ ಮೀನಾ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಉಪನ್ಯಾಸಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು ಮತದಾನ ಮಾಡಲು ತಿಳಿಸಿದರು ಈ ಸಂದರ್ಭದಲ್ಲಿ ಹೆಸರು ನೋಂದಾಯಿಸಲು ಫಾರಂ 19 ರಡಿ ವಿತರಿಸಲಾಯಿತು.





























