Home ಜಿಲ್ಲೆ ಯಾದಗಿರಿಯಲ್ಲಿ ಶಿಕ್ಷಕ ಮತದಾರರಿಂದ ಮತದಾನ

ಯಾದಗಿರಿಯಲ್ಲಿ ಶಿಕ್ಷಕ ಮತದಾರರಿಂದ ಮತದಾನ

ಯಾದಗಿರಿ: ಈಶಾನ್ಯ ಶಿಕ್ಷಕರ ವಿಧಾನ ಪರಿಷತ್ ಚುನಾವಣೆ-2026ರ ಅಂಗವಾಗಿ ಇಂದು ಯಾದಗಿರಿ ನಗರದ ತಹಶೀಲ್ದಾರ್ ಕಚೇರಿ ಮುಂದೆ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಶಿಕ್ಷಕ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ಚುನಾವಣೆಯ ಹಿನ್ನೆಲೆಯಲ್ಲಿ ಶಿಕ್ಷಕ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಮಹತ್ವದ ಜವಾಬ್ದಾರಿಯಾಗಿದ್ದು, ಶಿಕ್ಷಕ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಮತದಾನ ಕೇಂದ್ರದ ಸುತ್ತಮುತ್ತ ಪೆÇಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುವಂತೆ ಪೆÇಲೀಸ್ ಸಿಬ್ಬಂದಿ ಭದ್ರತೆ ಒದಗಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮತದಾನ ಕೇಂದ್ರದ ವ್ಯವಸ್ಥೆಗಳನ್ನು ಪರಿಶೀಲಿಸಿ, ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಿದರು.

ಈ ಸಂದರ್ಭದಲ್ಲಿ ಯಾದಗಿರಿ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್ಕರ್, ಯಾದಗಿರಿ ತಹಶೀಲ್ದಾರ್ ಸುರೇಶ್ ಅಂಕಲಗಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.