
ಸೈದಾಪುರ:ಜ.24:ಯುವಕರು ತಮ್ಮ ಮತದಾನದ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಚಲಾಯಿಸಬೇಕೆಂದು ಪ್ರಭಾರಿ ಉಪತಹಸೀಲ್ದಾರ ದಸ್ತಗಿರಿ ನಾಯಕ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ಸಂಸ್ಥೆಯಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡ “ರಾಷ್ಟ್ರೀಯ ಮತದಾರರ ದಿನ’ ಆಚರಣೆ ಪ್ರತಿಜ್ಞಾನವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಚುನಾವಣಾ ಪ್ರಕ್ರಿಯೆಯಲ್ಲಿ ತಿಳುವಳಿಕೆಯುಳ್ಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಮತದಾರರಲ್ಲಿ ಜಾಗೃತಿ ಮೂಡಿಸಲು ಬಳಸಲಾಗುತ್ತದೆ. ಯುವಕರು ತಮ್ಮ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಚಲಾಯಿಸುವುದು ಮತ್ತು ಇತರರನ್ನು ಸಹ ಹಾಗೆ ಮಾಡಲು ಪ್ರೇರೇಪಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿದರು.
ಗ್ರಾಮ ಆಡಳಿತ ಅಧಿಕಾರಿ ಮಡಿವಾಳಪ್ಪ, ಮುಖ್ಯಗುರು ಲಿಂಗಾರೆಡ್ಡಿ ನಾಯಕ, ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ಹಿರಿಯ ಶಿಕ್ಷಕ ಗೂಳಪ್ಪ.ಎಸ್.ಮಲ್ಹಾರ, ಹಣಮರೆಡ್ಡಿ ಮೋಟ್ನಳ್ಳಿ, ಸಂಗಾರೆಡ್ಡಿ ಪಾಟೀಲ, ಶೋಭ ಸೇರಿದಂತೆ ಇತರರಿದ್ದರು.























