
ಶಿರಹಟ್ಟಿ, ಸೆ.೨೦: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವಜನರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಹಾಗೂ ೧೮ ವರ್ಷ ಪೂರ್ಣಗೊಂಡ ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿರಹಟ್ಟಿ ತಾಲೂಕಿನಲ್ಲಿ ಇಂದು SಗಿಇಇP (Sಥಿsಣemಚಿಣiಛಿ ಗಿoಣeಡಿs’ ಇಜuಛಿಚಿಣioಟಿ ಚಿಟಿಜ ಇಟeಛಿಣoಡಿಚಿಟ Pಚಿಡಿಣiಛಿiಠಿಚಿಣioಟಿ) ಕಾರ್ಯಕ್ರಮದ ಅಂಗವಾಗಿ ವಿಶೇಷ ಕಾಲ್ನಡಿಗೆ ಜಾಗೃತಿ ಜಾಥಾ ಆಯೋಜಿಸಲಾಯಿತು.
ತಾಲೂಕಿನ ಬನ್ನಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ಈ ಜಾಗೃತಿ ಕಾರ್ಯಕ್ರಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು SಗಿಇಇP ಸಮಿತಿ ಅಧ್ಯಕ್ಷರು, ಇಖಔ ಹಾಗೂ ತಾಲೂಕು ದಂಡಾಧಿಕಾರಿಗಳು ಚಾಲನೆ ನೀಡಿದರು. ಅಧಿಕಾರಿಗಳು ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಗೆ ಚಾಲನೆ ನೀಡಿದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ
ಜಾಥಾವು ಬನ್ನಿಕೊಪ್ಪ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮತದಾರರ ನೋಂದಣಿ, ಮತದಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸಿತು.
೧೮ ವರ್ಷ ಪೂರ್ಣಗೊಂಡ ಯುವಜನರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ, ಅರ್ಹ ಯುವ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂಬ ಸಂದೇಶವನ್ನು ಜಾಥಾ ಮೂಲಕ ಸಾರಲಾಯಿತು.
ಜಾಥಾದ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ವಿವಿಧ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಗ್ರಾಮದ ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿದರು. ೧೮ ವರ್ಷ ತುಂಬಿದ ಯುವಜನರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ'', ನಿಮ್ಮ ಮತ ? ನಿಮ್ಮ ಹಕ್ಕು”, “ಪ್ರಜಾಪ್ರಭುತ್ವ ಬಲಪಡಿಸಲು ಮತದಾರರಾಗಿ ನೋಂದಾಯಿಸಿಕೊಳ್ಳಿ” ಎಂಬ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಮಾನವ ಸರಪಳಿ ಮೂಲಕ ವಿಶೇಷ ಜಾಗೃತಿ
ಜಾಥಾದ ಪ್ರಮುಖ ಅಂಗವಾಗಿ ಗ್ರಾಮದ ಪ್ರಮುಖ ಸ್ಥಳದಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ಮಾನವ ಸರಪಳಿ ನಿರ್ಮಿಸಿದರು. ಈ ಮೂಲಕ ಮತದಾರರ ಪಟ್ಟಿಯಲ್ಲಿ ಅರ್ಹರ ನೋಂದಣಿ ಮತ್ತು ಮತದಾನದ ಮಹತ್ವದ ಕುರಿತು ಸಾರ್ವಜನಿಕರ ಗಮನ ಸೆಳೆಯಲಾಯಿತು.
ಯುವಜನರು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದು, ಹೊಸ ಮತದಾರರು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಹೊಂದುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ SಗಿಇಇP ಕಾರ್ಯಕ್ರಮದ ಮೂಲಕ ಯುವ ಮತದಾರರಲ್ಲಿ ಚುನಾವಣಾ ಪ್ರಕ್ರಿಯೆಯ ಕುರಿತು ಅರಿವು ಮೂಡಿಸುವ ಪ್ರಯತ್ನ ಮಾಡಲಾಯಿತು.
ವಿವಿಧ ವರ್ಗದವರ ಸಕ್ರಿಯ ಭಾಗವಹಿಸುವಿಕೆ
ಕಾರ್ಯಕ್ರಮದಲ್ಲಿ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಬನ್ನಿಕೊಪ್ಪ ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಾರ್ವಜನಿಕರು ಸೇರಿದಂತೆ ಹಲವರು ಉತ್ಸಾಹದಿಂದ ಭಾಗವಹಿಸಿದರು.





























