
ಯಾದಗಿರಿ:ಜೂ.೧೮: ನಗರದ ೩೦ನೇ ವಾರ್ಡ್ನಲ್ಲಿ ಕಳೆದ ಒಂದು ವಾರದಿಂದ ಸರಿಯಾಗಿ ಕುಡಿಯುವ ನೀರು ಪೂರೈಕೆ ಆಗದೆ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಸ್ಥಳೀಯ ಯುವ ಮುಖಂಡ ಉಮೇಶ್ ಗುಳಗಿ ನಗರಸಭೆ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬುಧವಾರ ಮಾತನಾಡಿದ ಅವರು, ವಾರ್ಡ್ನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ಆರಂಭದಿAದಲೇ ನಗರಸಭೆ ಪೌರಾಯುಕ್ತರ ಗಮನಕ್ಕೆ ತರಲಾಗಿದೆ. ಆದರೆ ಹಲವು ಬಾರಿ ದೂರವಾಣಿ ಸಂಪರ್ಕಿಸಲು ಪ್ರಯತ್ನಿಸಿದರೂ ಪೌರಾಯುಕ್ತರು ಸಂಪರ್ಕಕ್ಕೆ ಸಿಗುತ್ತಿಲ್ಲ, ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ಸಾರ್ವಜನಿಕರ ಮೂಲಭೂತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಅಗತ್ಯ ನಗರಕ್ಕೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭೀಮಾ ನದಿಯ ನೀರು ಸರಬರಾಜು ವ್ಯವಸ್ಥೆಯ ಜಾಕ್ವೆಲ್ ಸಮಸ್ಯೆಯಿಂದ ನಾಲ್ಕು ದಿನಗಳ ಕಾಲ ವಾರ್ಡ್ಗೆ ನೀರು ಪೂರೈಕೆ ಸ್ಥಗಿತಗೊಂಡಿತ್ತು. ಇದರ ಜೊತೆಗೆ ಹೊಸಳ್ಳಿ ಗ್ರಾಮದ ಮಾರ್ಗದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಫುಟ್‌ಪಾತ್ ಕಾಮಗಾರಿಯಿಂದ ನೀರು ಸರಬರಾಜು ಪೈಪ್‌ಗಳು ಹಾನಿಗೊಳಗಾಗಿ ಮತ್ತೆ ಎರಡು ದಿನ ನೀರು ಬಾರದ ಪರಿಸ್ಥಿತಿ ರ್ಮಾಣವಾಗಿದೆ ಎಂದು ತಿಳಿಸಿದರು.
ಕುಡಿಯುವ ನೀರಿಗಾಗಿ ಜನರು ದಿನನಿತ್ಯ ಪರದಾಡುವಂತಾಗಿದೆ. ಸಂಬAಧಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ಸಾರ್ವಜನಿಕರೊಂದಿಗೆ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಉಮೇಶ್ ಗುಳಗಿ ಎಚ್ಚರಿಕೆ ನೀಡಿದರು.




























