
ನವದೆಹಲಿ,ಮೇ.೧-ಕೇಂದ್ರ ಸಚಿವರಾದ ಸಿ.ಆರ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ನಡುವೆ ಜಲ ಜೀವನ ಮಿಷನ್ ೨.೦ ಅಡಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ಸಂದರ್ಭದಲ್ಲಿ, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸನ್ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ, ಈ ಒಪ್ಪಂದವು ಜಲ ಸಂಪನ್ಮೂಲಗಳ ಸಂರಕ್ಷಣೆ, ಪರಿಣಾಮಕಾರಿ ಕಾರ್ಯಾಚರಣೆ ಮತ್ತು ನಿರ್ವಹಣೆ, ನೀರಿನ ಗುಣಮಟ್ಟ ನಿರ್ವಹಣೆ ಮತ್ತು ದೀರ್ಘಕಾಲೀನ ನೀರಿನ ಸುರಕ್ಷತೆಯ ಕಡೆಗೆ ಕೇಂದ್ರ-ರಾಜ್ಯ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ. ಸಭೆಯಲ್ಲಿ, ಕರ್ನಾಟಕ ರಾಜ್ಯದಲ್ಲಿನ ಜಲ ಜೀವನ್ ಮಿಷನ್‌ನ ಪರಿಣಾಮಕಾರಿ ಮತ್ತು ಗುಣಮಟ್ಟದ ಅನುಷ್ಠಾನಕ್ಕಾಗಿ ವಿವಿಧ ಪ್ರಮುಖ ಸಲಹೆಗಳನ್ನು ಸಹ ವಿವರವಾಗಿ ಚರ್ಚಿಸಲಾಯಿತು.


























