ದೇಶದ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು


ಲಕ್ಷೆ÷್ಮÃಶ್ವರ,ಆ.೧೬: ಪಟ್ಟಣದ ಪುರಸಭೆ ಆವರಣದ ಮುಂದೆ ೭೯ನೇ ಸ್ವಾತಂತ್ರೊ÷್ಯÃತ್ಸವದ ಅಂಗವಾಗಿ ಧ್ವಜಾರೋಹಣವನ್ನು ಪುರಸಭೆಯ ಅಧ್ಯಕ್ಷ ಯಲ್ಲವ್ವ ದುರ್ಗಣ್ಣವರ್ ನೆರವೇರಿಸಿದರು.
ಬಳಿಕ ಮಾತನಾಡಿ ದೇಶದ ಸ್ವಾತಂತ್ರ÷್ಯಕ್ಕಾಗಿ ಅನೇಕ ಮಹನೀಯರು ತ್ಯಾಗ ಮಾಡಿದ್ದಾರೆ ಅವರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ÷್ಯ ದೊರೆತಿದ್ದು ಅದರ ಮೌಲ್ಯಗಳನ್ನು ಅರ್ಥ ಮಾಡಿಕೊಂಡು ದೇಶದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.
ಅವರು ಪಟ್ಟಣದ ಅಭಿವೃದ್ಧಿಗಾಗಿ ಅನುದಾನಗಳನ್ನು ಬಳಸಿಕೊಂಡು ಮೂಲಭೂತ ಸೌಲಭ್ಯ ಕಲ್ಪಿಸಲು ಪ್ರಯತ್ನ ಮಾಡುತ್ತಿದ್ದು ಅನುದಾನದ ಆದ್ಯತೆಯ ಮೇರೆಗೆ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಹೀಬ್ ಜಾನ್ ಹವಾಲ್ದಾರ್ ಪ್ರವೀಣ್ ಬಾಳಿಕಾಯಿ ಮಹೇಶ ಹೊಗೆ ಸೊಪ್ಪಿನ ರಾಜು ಕುಂಬಿ ವಿಜಯ ಕರಡಿ ಸೇರಿದಂತೆ ಅನೇಕರು ಮಾತನಾಡಿದರು. ಮುಖ್ಯ ಅಧಿಕಾರಿ ಮಹಾಂತೇಶ್ ಬಿಳಗಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಪುರಸಭೆಯ ಸರ್ವ ಸದಸ್ಯರು ಮತ್ತು ಸಂಸ್ಥೆಯ ಉಮಾ ವಿದ್ಯಾಲಯ ಎಂಎ ಕಾಲೇಜಿನ ಪ್ರಾಚಾರ್ಯರು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಭಾಗವಹಿಸಿದ್ದರು ಪುರಸಭೆಯ ಕಂದಾಯ ಅಧಿಕಾರಿ ಹನುಮಂತ್ ನಂದಣ್ಣನವರ ಕಾರ್ಯಕ್ರಮ ನಿರ್ವಹಿಸಿದರು ನಂತರ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಜರುಗಿತು.