
ಬೆಂಗಳೂರು ಫೆ. ೨೩ ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ, ದಲಿತತ್ವ ಎಂದರೆ ಸ್ವಾಭಿಮಾನ, ದಲಿತತ್ವ ಎಂದರೆ ಅನ್ಯಾಯಕ್ಕೆ ಪ್ರತಿರೋಧ, ದಲಿತತ್ವ ಎಂದರೆ ಆತ್ಮಬಲ. ಇಂದು ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ದಲಿತತ್ವದ ಸ್ವಾಭಿಮಾನವನ್ನು ಆರ್‌ಎಸ್‌ಎಸ್ ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು ಎಂದು ಅವರು ಹರಿಹಾಯಿದಿದ್ದಾರೆ . ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿಯವರಿಗೆ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ! ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಆರ್ ಎಸ್ ಎಸ್ ನವರ ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ ಎಂದು ಭಾವಿಸಿದ್ದೇನೆ. ಎಂದು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.
ವಂಶಪರಂಪರೆಯ ರಾಜಕಾರಣದ ಬಗ್ಗೆ ಮಾತನಾಡಲೇಬೇಕು ಎಂದಿದ್ದರೆ ತಮ್ಮದೇ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ್ ಬೆಲ್ಲದ್ ಅವರಿಂದ ಮಾತನಾಡಲು ಶುರು ಮಾಡಲಿ, ಆ ಧೈರ್ಯ ನಾರಾಯಣಸ್ವಾಮಿಯವರಿಗಿದೆಯೇ ಎಂದು ಸಚಿವ ಪ್ರಿಯಾಂಕ್ ಪ್ರಶ್ನಿಸಿದ್ದಾರೆ!



























