Home ಜಿಲ್ಲೆ ಕಲಬುರಗಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

ಕಲಬುರಗಿ: ನಗರದ ಜೇವರ್ಗಿ ಕಾಲೋನಿಯಲ್ಲಿರುವ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಡಾ. ಪಂಡಿತ್ ಸಿ. ಬಿಳಾಮಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆ ಹಾಗೂ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ರಾಮಕೃಷ್ಣ ರೆಡ್ಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ ವಿ. ಮೋರಗೆ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನಲ್ಲಿ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ. ಹಾಗೂ ಎಂ.ಎ. ರಾಜ್ಯಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ಕನ್ನಡ, ಎಂ.ಎಸ್ಸಿ. ಮತ್ತು ಎಂ.ಕಾಂ. ಪ್ರಥಮ ವರ್ಷದ ವಿದ್ಯಾರ್ಥಿನಿಯರನ್ನು ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಸಾಂಸ್ಕøತಿಕ ಸಮಿತಿಯ ಕಾರ್ಯದರ್ಶಿ ಡಾ. ಜ್ಯೋತಿ ಕೆ.ಎಸ್., ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಎ ಮತ್ತು ಬಿ ಅಧಿಕಾರಿಗಳಾದ ಡಾ. ಸಂತೋಷ ಹುಂಪಿ ಹಾಗೂ ಡಾ. ಮೀನಾಕ್ಷಿ ವಿಜಯಕುಮಾರ, ಐಕ್ಯೂಎಸಿ ಸಂಯೋಜಕ ಡಾ. ಶರಣಬಸಪ್ಪ ಚಿಕ್ಕಳ್ಳಿ, ಡಾ. ವಿದ್ಯಾ ಡಿ., ಸ್ಕೌಟ್ಸ್ ಮತ್ತು ಗೈಡ್ಸ್ ಸಂಚಾಲಕಿ ಡಾ. ಅನಸೂಯಾ ಪಾಟೀಲ, ಸಿಬ್ಬಂದಿ ಕಾರ್ಯದರ್ಶಿ ಡಾ. ರಾಮಲಿಂಗ ಎಂ. ಭೋಸಲೆ, ಮಹಿಳಾ ಸಿಬ್ಬಂದಿ ಕಾರ್ಯದರ್ಶಿ ಡಾ. ನಿಯಾಜ್ ಬೇಗಂ, ಭಾರತೀಯ ಯುವ ರೆಡ್‍ಕ್ರಾಸ್ ಸಂಯೋಜಕಿ ಡಾ. ಪದ್ಮಾವತಿ ಧನ್ನಿ, ಬುದ್ಧ-ಬಸವ-ಡಾ. ಬಿ.ಆರ್. ಅಂಬೇಡ್ಕರ್ ವೇದಿಕೆಯ ಪ್ರತಿನಿಧಿ ನಿತೀಶ ಭೂಶೆಟ್ಟಿ ಹಾಗೂ ಗ್ರಂಥಪಾಲಕ ಡಾ. ವಿನೋದಕುಮಾರ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.