
ಬೀದರ್: ಜೂ.೨೩:ಶಿಕ್ಷಣವು ಸಮಾಜದಲ್ಲಿ ಜಾಗೃತಿ ಮತ್ತು ಪ್ರಗತಿಯನ್ನು ತರುತ್ತದೆ. ಉತ್ತಮ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾರೆ ಹೀಗಾಗಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಬಂಬುಳಗಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸುಮಾರು ೭ ಕೋಟಿ ರೂ. ವೆಚ್ಚದ ಜಿ+೪ ಮಾದರಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ವಿಧ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು.
ಗ್ರಾಮೀಣ ಭಾಗದ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಬೇಕೆAಬ ಸದುದ್ದೇಶದಿಂದ ಕ್ಷೇತ್ರದಾದ್ಯಂತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದಾಗಿ ತಿಳಿಸಿದರು. ಗ್ರಾಮಗಳಲ್ಲಿ ಸರ್ಕಾರಿ ಶಾಲೆಗಳ ಹೆಚ್ಚುವರಿ ಕೊಠಡಿಗಳಿಗೆ ಚಾಲನೆ ನೀಡಿ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದೆAಬ ಉದ್ದೇಶ ಹೊಂದಿರುವ ನಾನು ಅಗತ್ಯವಿರುವ ಗ್ರಾಮಗಳಿಗೆ ಕೊಠಡಿ ಹಾಗೂ ಶಾಲೆಗಳ ದುರುಸ್ಥಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಹಲವು ಸರ್ಕಾರಿ ಶಾಲೆಯ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂದರು. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬದಿಗೊತ್ತಿ ಸುಸಜ್ಜಿತವಾದ ಕಟ್ಟಡವನ್ನು ಹೊಂದಿರುವ ಮತ್ತು ನುರಿತ ಶಿಕ್ಷಕರು ಹಾಗೂ ಹಲವಾರು ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುವುದರ ಮೂಲಕ ಶಾಲೆಗಳ ಉಳಿವಿಗೆ ಕ್ರಮ ವಹಿಸುವಂತೆ ಮನವಿ ಮಾಡಿದರು.
ಮುಂದಿನ ದಿನಗಳಲ್ಲೂ ಇನ್ನಷ್ಟೂ ಕಟ್ಟಡ ಕಾಮಗಾರಿಗೆ ಚಾಲನೆ ದೊರೆಯಲಿದ್ದು ವಿದ್ಯಾರ್ಥಿಗಳಿಗಾಗಿ ಕ್ಷೇತ್ರದಲ್ಲಿ ಶಿಥಿಲಗೊಂಡಿರುವ ಶಾಲೆಗಳ ದುರಸ್ತಿ ಕಾರ್ಯಕ್ಕೂ ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಇದೀಗ ಬಂಬುಳಗಿ ಗ್ರಾಮದಲ್ಲಿನ ನೂತನ ಶಾಲಾ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದು ಹಂತ ಹಂತವಾಗಿ ಕ್ಷೇತ್ರಾದ್ಯಂತ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹಲವಾರು ಸಮಸ್ಯೆಗಳ ಮಧ್ಯೆ ಜೀವನ ನಡೆಸುತ್ತಿದ್ದೇವೆ. ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು, ಕಲಿಕೆಯಿಂದ ನಾವು ಎಲ್ಲ ಸಮಸ್ಯೆಗಳಿಗೆ ಪರಿಹಾರ ಕೊಂಡುಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳಿಗೆ ಆರೋಗ್ಯಕರ ವಾತಾವರಣಕ್ಕೆ ಶಾಲಾ ಆಡಳಿತ ಮಂಡಳಿ ಒತ್ತು ನೀಡಬೇಕು. ಇದು ಮಕ್ಕಳ ಮನಸ್ಸಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರಿ, ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಬಡತನ ಹಾಗೂ ಸಂಕಷ್ಟಗಳ ನಡುವೆಯೂ ಗ್ರಾಮೀಣ ಭಾಗದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ. ಶಿಕ್ಷಣದಿಂದ ಸಮಾಜದ ಪ್ರತಿಯೊಬ್ಬರಿಗೂ ಅವಕಾಶಗಳು ಸಿಗಬೇಕು ಶಾಲಾ ಶಿಕ್ಷಕರು ಹಾಗೂ ಪೋಷಕರು ತಮ್ಮ ಮಕ್ಕಳ ಮನಸ್ಥಿತಿ, ಆಸಕ್ತಿ ಗಮನಿಸಿ ಆ ದಿಸೆಯಲ್ಲಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ಅವರು ತಮ್ಮ ಗುರಿ ತಲುಪುತ್ತಾರೆ. ಪಠ್ಯ-ಪುಸ್ತಕಗಳ ಅಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪುಸ್ತಕಗಳತ್ತ ಗಮನಹರಿಸಬೇಕು. ಇದರಿಂದ ಮಕ್ಕಳಲ್ಲಿ ಜ್ಞಾನ್ ಸಂಪತ್ತು ವೃದ್ಧಿಯಾಗುತ್ತದೆ ಎಂದು ಅವರು ಹೇಳಿದರು.
ಬಂಬುಳಗಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಳಿರಾಮ, ಗ್ರಾಮಪಂ ಉಪಾಧ್ಯಕ್ಷರಾದ ಶಿಲ್ಪಾ ಭಕ್ತಕುಮಾರ, ಮುಖಂಡರಾದ ಗುರುನಾಥ ರಾಜಗೀರಾ, ಶಿವಕುಮಾರ ಸ್ವಾಮಿ, ಬಸವರಾಜ ಬೋರಾಳ, ಸಂತೋಷ ರೆಡ್ಡಿ ಆಣದೂರ, ರಾಜಶೇಖರ ಕೋಳಾರ, ವೀರಶೆಟ್ಟಿ ಮೂಲಗೆ, ಶಾಂತಮ್ಮ ಬಂಬುಳಗಿ, ಸಂತೋಷಿ ನಿಡವಂಚಾ, ರಾಜಕುಮಾರ ವಡ್ಡಿ, ನಾಗಶೆಟ್ಟಿ ಚಟ್ಟನಳ್ಳಿ, ಭದ್ರಶೆಟ್ಟಿ ನಾರಾ, ಶಿವಕುಮಾರ ದೇಶಪಾಂಡೆ, ಲೋಕೇಶ ಔಂಟಿ, ಮುಸ್ತಫಾ, ಶಾಲೆಯ ಪ್ರಾಂಶುಪಾಲರಾದ ಎಂಡಿ ಖಾಜಾ ಪಟೇಲ್, ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.