
ಮಧುಗಿರಿ, ಏ. ೪- ವನ್ಯಜೀವಿಗಳು ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವನ್ಯಜೀವಿಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿ ಎಂದು ವಲಯ ಅರಣ್ಯಾಧಿಕಾರಿ ಸುರೇಶ್ ಹೇಳಿದರು.
ವಿಶ್ವ ಕರಡಿ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಅರಣ್ಯ ಇಲಾಖೆ ಮತ್ತು ಐಟಿಐ ಕಾಲೇಜಿನ ವಿದ್ಯಾರ್ಥಿಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕರಡಿಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅರಣ್ಯ ನಾಶ ಹಾಗೂ ಮಾನವ ಚಟುವಟಿಕೆಗಳ ಹೆಚ್ಚಳದಿಂದ ಕಾಡು ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕುತ್ತಿವೆ. ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದರು.
ಕರಡಿಗಳ ಸಂರಕ್ಷಣೆ ಹಾಗೂ ಪರಿಸರ ರಕ್ಷಣೆಯ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕಾಲ್ನಡಿಗೆ ಜಾಗೃತಿ ರ?ಯಾಲಿ ನಡೆಸಿದರು.
ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದಿಂದ ಆರಂಭವಾದ ರ?ಯಾಲಿ ತುಮಕೂರು ಗೇಟ್‌ವರೆಗೆ ಸಾಗಿತು. ಈ ವೇಳೆ ವಿದ್ಯಾರ್ಥಿಗಳು ಕರಡಿಗಳ ಸಂರಕ್ಷಣೆ, ಅರಣ್ಯ ರಕ್ಷಣೆ ಮತ್ತು ಪರಿಸರ ಕಾಪಾಡುವ ಕುರಿತು ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಜಾಗೃತಿ ರ?ಯಾಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಮುತ್ತುರಾಜ್ ಸೇರಿದಂತೆ ಸಿಬ್ಬಂದಿಗಳು, ಐಟಿಐ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.























