
ವಿಜಯಪುರ, ಡಿ. 22:ಜಿಲ್ಲೆಯಲ್ಲಿ ಕೆಲ ದಿನಗಳಿಂದ ತೀವ್ರ ಚಳಿಯ ಹಿನ್ನೆಲೆಯಲ್ಲಿ ಶಾಲೆಗಳ ಸಮಯ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಮುಂದಿನ 10 ದಿನಗಳ ವರೆಗೆ ಬೆಳಿಗ್ಗೆ 10 ರಿಂದ ತರಗತಿಗಳನ್ನು ಆರಂಭಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಸರ್ಕಾರಿ , ಅನುದಾನಿತ, ಖಾಸಗಿ ಶಾಲೆಗಳಿಗೆ ಈ ಆದೇಶ ಅನ್ವಯವಾಗುತ್ತದೆ.
ತೀವ್ರ ಚಳಿಯಿಂದ ಶಾಲಾ ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿತ್ತು. ಈ ಹಿನ್ನಲೆ ಶಾಲೆಗಳ ಸಮಯ ಬದಲಾವಣೆಗೆ ಆಗ್ರಹ ಕೇಳಿ ಬಂದಿತ್ತು. ಈಗ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳ ಸಮಯ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿರುವುದು ಸಾರ್ವಜನಿಕ ವಲಯದಲ್ಲಿ ಸ್ವಾಗತ ವ್ಯಕ್ತವಾಗಿದೆ.

























