ಬೆಳಗಾವಿ, ನ.೧೯: ಡಿಸೆಂಬರ್ ೮ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳಗಾವಿ ಚಳಿಗಾಲ ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು.
ಸುವರ್ಣ ವಿಧಾನಸೌಧದಲ್ಲಿ ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿಸೆಂಬರ? ೮ ರಿಂದ ೧೯ ರ ವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿ ಸಿಬ್ಬಂದಿ ಬದ್ದತೆಯೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಅಧಿವೇಶನ ಯಶಸಸ್ವಿಗೊಳಿಸಬೇಕು.
ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಯಾವುದೇ ತೆರನಾದ ಸಮಸ್ಯೆಗಳನ್ನು ಕೂಡಲೇ ಸಂಬAಧಿತರ ಗಮನಕ್ಕೆ ತಂದು ತರುವುದರ ಮೂಲಕ ಸಮಸ್ಯಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.
ದೂರಸAಪರ್ಕ ಹಾಗೂ ನೆಟವರ್ಕ್ ಸಮಸ್ಯೆಗಳು ತಲೆದೋರದಂತೆ ನಿಗಾವಹಿಸಬೇಕು. ಅಗತ್ಯವಿರುವ ಗಣಕ ಯಂತ್ರ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು.
ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನಕಾರರಿಗೆ ಸೂಕ್ತ ಸ್ಥಳಾವಕಾಶವನ್ನು ಗುರುತಿಸುವುದರ ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ಅಗತ್ಯ ಸೌಲಭ್ಯ ಹಾಗೂ ಸೂಕ್ತ ಪೋಲಿಸ್ ಭದ್ರತೆ ಒದಗಿಸಲು ಕ್ರಮ ವಹಿಸಲು ತಿಳಿಸಿದರು.
ಸಾರ್ವಜನಿಕರಿಗೆ ಮಾಹಿತಿ ಕೇಂದ್ರ:
ಅದೇ ರೀತಿ ಸುವರ್ಣ ವಿಧಾನಸೌಧದಲ್ಲಿ ಸೂಕ್ತ ಭದ್ರತೆ ಹಾಗೂ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಅಧಿವೇಶನ ಸಂದರ್ಭದಲ್ಲಿ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಸಭಾಧ್ಯಕ್ಷರಾದ ಖಾದರ್ ಫರೀದ್ ಸೂಚಿಸಿದರು.
ಕಳೆದ ಬಾರಿಯಂತೆ ಈ ಬಾರಿಯೂ ಸಂಸ್ಕöÈತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸುವರ್ಣ ವಿಧಾನಸೌಧದ ಆವರಣದಲ್ಲಿ ಕಳೆದ ಬಾರಿ ಶಾಸಕರುಗಳು ಸಸಿಗಳನ್ನು ನೆಟ್ಟಿದ್ದು, ಈ ಬಾರಿಯೂ ಪ್ರತಿ ಶಾಸಕರುಗಳಿಂದ ಸಸಿಗಳನ್ನು ನೆಡಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದರು.
ಅಧಿವೇಶನಕ್ಕೆ ಸಂಬAಧಿಸಿದAತೆ ವಿತರಿಸಲಾಗುವ ಪಾಸ್ ಗಳಲ್ಲಿ ಯಾವುದೇ ಗೊಂದಲಗಳಾಗದAತೆ ನಿರ್ವಹಿಸಬೇಕು. ಪಾಸ್ ವಿತರಣೆಗೆ ಸಂಬAಧಿಸಿದAತೆ ಪೋಲಿಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ಕಲಾಪಗಳ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ಕಲಾಪಗಳ ವೀಕ್ಷಣೆಗೆ ಸೂಕ್ತ ಸಮಯವನ್ನು ನಿಗದಿಪಡಿಸಬೇಕು.
ವಿಧಾನ ಮಂಡಲದ ಕಾರ್ಯಕಲಾಪಗಳ ವೀಕ್ಷಣೆಗೆ ಆಗಮಿಸುವ ಶಾಲಾ, ಕಾಲೇಜು ವಿಧ್ಯಾರ್ಥಿಗಳ ಜೊತೆಗೆ ಪೌರ ಕಾರ್ಮಿಕರರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ಮಹಿಳೆಯರಿಗಾಗಿ ಅವಕಾಶ ಕಲ್ಪಿಸಲು ಚಿಂತಿಸಲಾಗಿದ್ದು ಈ ಕುರಿತು ಅಗತ್ಯದ ವ್ಯವಸ್ಥೆ ಮಾಡಲು ತಿಳಿಸಿದರು.
ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಚಳಿಗಾಲ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರುಗಳಿಗೆ, ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಮಾರ್ಷ ಲ್ ಗಳಿಗೆ ಸೂಕ್ತ ಸಾರಿಗೆ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಬೇಕು.
ಅಧಿವೇಶನ ಸಂದರ್ಭದಲ್ಲಿ ಸಚಿವರು, ಶಾಸಕರು ತಂಗುವ ಹೋಟೆಲ್ ಗಳಲ್ಲಿ ತಜ್ಞ ವೈದ್ಯರ ತಂಡವನ್ನು ನಿಯೋಜಿಸಬೇಕು. ಅದೇ ರೀತಿ ಸುವರ್ಣ ವಿಧಾನ ಸೌಧದಲ್ಲಿಯೂ ಸಹ ವೈದ್ಯರ ತಂಡವನ್ನು ಸುಸಜ್ಜಿತ ಅಂಬ್ಯಲೆನ್ಸ್ ನೊಂದಿಗೆ ನಿಯೋಜಿಸಲು ತಿಳಿಸಿದರು.
ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ, ಕರ್ನಾಟಕ ವಿಶ್ವ ವಿದ್ಯಾಲಯ ಹಾಗೂ ಅಕ್ಕಮಹಾದೇವಿ ವಿಶ್ವ ವಿದ್ಯಾಲಾಯಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಆಯ್ದ ೩೦ ವಿದ್ಯಾರ್ಥಿಗಳ ತಂಡಕ್ಕೆ ವಿಧಾನ ಮಂಡಲದ ಕಾರ್ಯ ಕಲಾಪಗಳ ಮಾಹಿತಿ ಪಡೆಯಲು ಅನುಕೂಲವಾಗುವಂತೆ ವೀಕ್ಷಣೆಗೆ ಹೆಚ್ಚಿನ ಸಮಯ ನಿಗದಿಪಡಿಸಲಾಗುವುದು. ಅದರ ಪ್ರಕಾರ ಅವರಿಗೆ ಅವಕಾಶವನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿ, ಚಳಿಗಾಲ ಅಧಿವೇಶನಕ್ಕೆ ಸಂಬAಧಿಸಿದAತೆ ಕೈಗೊಳ್ಳಲಾದ ಪೂರ್ವ ತಯಾರಿ ಕುರಿತು ವಿವರಿಸಿದರು.
ಪ್ರಸಕ್ತ ಬೆಳಗಾವಿ ಚಳಿಗಾಲ ಅಧಿವೇಶನ ಯಶಸ್ವಿಗಾಗಿ ಕಳೆದ ಸಾಲಿನಂತೆಯೇ ಈ ಬಾರಿಯೂ ಹನ್ನೆರೆಡು ಸಮಿತಿಗಳನ್ನು ರಚಿಸಿದ್ದು, ಆಯಾ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪೋಲಿಸ್ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ ಅವರು ಮಾತನಾಡಿ, ಅಧಿವೇಶನದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬAಧಿಸಿದAತೆ ಸೂಕ್ತ ಪೋಲಿಸ್ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪೋಲಿಸ್ ಭದ್ರತೆಗೆ ಸಂಬAಧಿಸಿದAತೆ ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಪೋಲಿಸ್ ಸಿಬ್ಬಂದಿಗಳನ್ನು ಅಧಿವೇಶನಕ್ಕೆ ನಿಯೋಜಿಸಲಾಗುತ್ತಿದೆ. ಅಧಿವೇಶನ ಸಂದರ್ಭದಲ್ಲಿ ನಿಯೋಜಿತ ಪೋಲಿಸ್ ಸಿಬ್ಬಂದಿ ಅಧಿಕಾರಿಗಳಿಗಾಗಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವಿಧಾನ ಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ರಾಜು(ಆಸೀಫ್) ಸೇಠ, ವಿಧಾನಸಭೆ ಕಾರ್ಯದರ್ಶಿಗಳಾದ ಆರ್. ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿಗಳಾದ ಮಹಾಲಕ್ಷಿ÷್ಮÃ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ರಾಷ್ಟಿçÃಯ ಐಕ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.
ತದನಂತರ ವಿಧಾನಸಭೆ, ವಿಧಾನಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಬ್ಯಾಂಕ್ವೆಟ್ ಹಾಲ್ ಮತ್ತಿತರ ಸ್ಥಳಗಳನ್ನು ವಿಧಾನಸಭಾಧ್ಯಕ್ಷರು, ಸಭಾಪತಿಯವರು ಪರಿಶೀಲಿಸಿ, ಧ್ವನಿ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.































