Home ಕ್ರೈಂ ಸುದ್ದಿಗಳು ಲಿಂಗನೂರ ಗ್ರಾಮದಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆತಹಶೀಲ್ದಾರ ಅನೀಲ ಬಡಗೇರ ಭೇಟಿ – ಪೊಲೀಸ್ ತನಿಖೆ...

ಲಿಂಗನೂರ ಗ್ರಾಮದಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆತಹಶೀಲ್ದಾರ ಅನೀಲ ಬಡಗೇರ ಭೇಟಿ – ಪೊಲೀಸ್ ತನಿಖೆ ಆರಂಭ

ಜಮಖಂಡಿ: ಮೇ.28:ತಾಲೂಕಿನ ಲಿಂಗನೂರ ಗ್ರಾಮದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಕ್ಷತಾ ರಮೇಶ ಔರಸಂಗ (26) ಎಂದು ಗುರುತಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಹಶೀಲ್ದಾರ ಅನೀಲ ಬಡಗೇರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬಸ್ಥರು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಘಟನೆಯಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಕುರಿತು ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.