
ಕರಜಗಿ,ಫೆ.1-ಮನೆಯಲ್ಲಿದ್ದ ಒಂಟಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ 2 ತೊಲೆ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ಕರಜಗಿ ಗ್ರಾಮದಲ್ಲಿ ಶನಿವಾರ ರಾತ್ರಿ 9.30ರ ಸುಮಾರಿಗೆ ನಡೆದಿದೆ.
ಮಗಳ ಮದುವೆಗಾಗಿ ಮಹಿಳೆ ಬಂಗಾರ ಸಂಗ್ರಹಿಸಿ ಇಟ್ಟಿದ್ದರು. ಕಳ್ಳರು ರಾತ್ರಿ ವೇಳೆ ಮನೆಯೊಳಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಚಿರಾಡದಂತೆ ಮಾಡಿ ಚಿನ್ನಾಭರಣ ದೋಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕಳವು ಪ್ರಕರಣ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಸುದ್ದಿ ತಿಳದು ಸಿಪಿಐ ಚನ್ನಯ್ಯ ಹಿರೇಮಠ, ಪಿಎಸ್‍ಐ ಸೋಮಲಿಂಗ ಒಡೆಯರ್, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.




























