
ಬೀದರ, ಮಾ.9: ಮಹಿಳೆಯರು ಇಂದು ಶಿಕ್ಷಣ, ಉದ್ಯೋಗ, ರಾಜಕೀಯ ಹಾಗೂ ಕ್ರೀಡಾ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಾಮಥ್ರ್ಯವನ್ನು ತೋರಿಸಿ ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಅವರು ರವಿವಾರ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಆಯೋಜಿಸಿದ 2025-26ನೇ ಸಾಲಿನ ಬೀದರ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಗಳು ಮಹಿಳೆಯರ ಆರೋಗ್ಯ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇಂತಹ ಕ್ರೀಡಾಕೂಟಗಳು ಗ್ರಾಮೀಣ ಹಾಗೂ ನಗರ ಭಾಗಗಳ ಮಹಿಳೆಯರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗುತ್ತವೆ. ಜಿಲ್ಲೆಯ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಸಚಿವರು ಹಾರೈಸಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ ಖಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಸೇರಿದಂತೆ ಅನೇಕ ಮಹಿಳಾ ಕ್ರೀಡಾಪಟುಗಳು ಉಪಸ್ಥಿತರಿದ್ದರು.






















