
ಸೈದಾಪುರ:ಜೂ.೪:ತಮಗೆ ಕೊಟ್ಟಿರುವ ಜವಬ್ದಾರಿಯನ್ನು ಸೇವಾ ಮನೋಭಾನವೆಯೊಂದಿಗೆ ಕಾರ್ಯ ನಿರ್ವಹಿಸುವುದುರ ಮೂಲಕ ಉಪನ್ಯಾಸಕರ ಸಂಘದ ಅಭಿವೃದ್ದಿಗೆ ಪ್ರಯತ್ನ ಮಾಡಿ ಎಂದು ಮುಖ್ಯಗುರು ಲಿಂಗಾರೆಡ್ಡಿ ನಾಯಕ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ಸಂಸ್ಥೆಯ ವಿವಿಧ ವಿಭಾಗಗಳಿಂದ ಇತ್ತಿಚಿಗೆ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಚುನಾವಣೆಯಲ್ಲಿ ಕಾರ್ಯದರ್ಶಿಗಳಾಗಿ ಅವಿರೋಧ ಆಯ್ಕೆಯಾದ ಸಂಸ್ಥೆಯ ಮಲ್ಹಾರ ಕಾರಡ್ಡಿ ಬಸವಂತರಾಯ ಮತ್ತು ಸಿದ್ದಪ್ಪ ಸ್ಮಾರಕ ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಚಂದ್ರಶೇಖರ ಡೊಣ್ಣೆಗೌಡ ಅವರನ್ನು ಸನ್ಮಾನಿಸಿ ಮಾತನಾಡಿದರು. ಕೊಟ್ಟ ಅವಕಾಶವನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡೆಸಿಕೊಂಡು ಪ್ರಯತ್ನ ಮಾಡಿದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಹತ್ವ ದೊರೆಯುತ್ತದೆ. ಸಂಘದ ಅಭಿವೃದ್ಧಿಯಲ್ಲಿ ನಿಮ್ಮದೆಯಾದ ಪ್ರಮುಖ ಪಾತ್ರ ನಿರ್ವಹಣೆ ಮಾಡುವಂತಾಗಲಿ ಎಂದು ಹಾರೈಸಿದರು.
ಸನ್ಮಾನ ಸ್ವೀಕರಿಸಿ ಉಪನ್ಯಾಸಕ ಚಂದ್ರಶೇಖರ ಡೊಣ್ಣೆಗೌಡ ಮಾತನಾಡಿ, ಇದರಿಂದ ನನ್ನ ಜವಬ್ದಾರಿ ಹೆಚ್ಚಾಗುವಂತೆ ಮಾಡಿದೆ. ಕಾರ್ಯದರ್ಶಿ ಸ್ಥಾನಕ್ಕೆ ನನ್ನನ್ನು ಅವಿರೋಧ ಆಯ್ಕೆಯಾಗಿರುವುದಕ್ಕೆ ಕಾರಣರಾದ ಎಲ್ಲರ ಭರವಸೆಯಂತೆ ಹಿರಿಯ ಮಾರ್ಗದರ್ಶನದೊಂದಿಗೆ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಹಂಪಣ್ಣ ಸಜ್ಜನಶೆಟ್ಟಿ, ಕರಬಸಯ್ಯ ದಂಡಿಗಿಮಠ, ಶಿಕ್ಷಕರಾದ ಗೂಳಪ್ಪ.ಎಸ್.ಮಲ್ಹಾರ, ರಾಚಯ್ಯ ಸ್ವಾಮಿ ಬಾಡಿಯಾಲ, ಬಸವರಾಜ ಭರಮಶೆಟ್ಟಿ, ಭೀಮಣ್ಣ ನಾಯಕ, ಸತೀಶ ಪರ‍್ಮಾಂ, ಸಂಗಾರೆಡ್ಡಿ ಪಾಟೀಲ, ಭರತಕುಮಾರ, ಸೌಭಾಗ್ಯ ಸೇರಿದಂತೆ ಇತರರಿದ್ದರು.


























