
ಧಾರವಾಡ, ಮಾ11: ಕರ್ನಾಟಕ ವಿಶ್ವವಿದ್ಯಾಲಯದ ಕೌಶಲ್ಯ ಅಭಿವೃದ್ಧಿ ಕೇಂದ್ರವು ಲರ್ನಿಂಗ್ ಲಿಂಕ್ಸ ಫೌಂಡೇಶನ್ ಹಾಗೂ ಐಬಿಎಂ ಸ್ಕಿಲ್ ಬಿಲ್ಡ್ ಸಹಯೋಗದೊಂದಿಗೆ ಹಮ್ಮಿಕೊಂಡಿರುವ `ಆರ್ಟಿಫಿಶಿಯಲ್ ಇಂಟೆಲಿಜೆನ್ಸ ಮತ್ತು ಸೈಬರ್ ಸೆಕ್ಯೂರಿಟಿ’ ಕುರಿತ ಎರಡು ದಿನಗಳ ವಿಶೇಷ ಕಾರ್ಯಾಗಾರವು ವಿಶ್ವವಿದ್ಯಾಲಯದ ಆವರಣದಲ್ಲಿ ಆರಂಭವಾಯಿತು.
ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ಮತ್ತು ಬಯೋಟೆಕ್ನಾಲಜಿ ವಿಭಾಗದ ಸೆಮಿನಾರ್ ಹಾಲ್‍ನಲ್ಲಿ ಸಮಾರಂಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ಹಾಗೂ ಹಿರಿಯ ಪ್ರಾಧ್ಯಾಪಕ ಪೆÇ್ರ. ಅರವಿಂದ ಮುಳಿಮನಿ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಲರ್ನಿಂಗ್ ಲಿಂಕ್ಸ್ ಫೌಂಡೇಶನ್‍ನ ಸಚಿನ್‍ಕುಮಾರ್ ಪಾಟೀಲ್ ಅವರು ಗೌರವಾನ್ವಿತ ಅತಿಥಿಗಳಾಗಿಪಾಲ್ಗೊಂಡಿದ್ದರು. ಮೈಕ್ರೋ ಬಯಾಲಜಿ ಮತ್ತು ಬಯೋಟೆಕ್ನಾಲಜಿ ವಿಭಾಗದ ಅಧ್ಯಕ್ಷರಾದ ಪೆÇ್ರ. ಎಂ. ಬಿ. ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಂಯೋಜಕ ಪೆÇ್ರ. ಕೆ. ಎಸ್. ದೇವರಾಜು ಅವರು ಕಾರ್ಯಕ್ರಮದ ಸಂಚಾಲಕರಾಗಿದ್ದಾರೆ.
ಮಾರ್ಚ್ 9 ಮತ್ತು 10 ರಂದು ನಡೆಯುವ ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಸುರಕ್ಷತೆಯ ಪ್ರಸಕ್ತ ಸವಾಲುಗಳು ಹಾಗೂ ತಾಂತ್ರಿಕ ಬೆಳವಣಿಗೆಗಳ ಬಗ್ಗೆ ತರಬೇತಿ ನೀಡುವ ಗುರಿಯನ್ನು ಹೊಂದಿದೆ. ಈ ಜ್ಞಾನವರ್ಧಕ ಕಾರ್ಯಕ್ರಮದಲ್ಲಿಪಾಲ್ಗೊಳ್ಳಲು ಆಸಕ್ತರಿಗೆ ಮುಕ್ತ ಅವಕಾಶವಿದೆ.






















