
ಕೋಲಾರ, ಮೇ ೨೪-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ” ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ರ ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಮೇ ೨೬ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕೋಲಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್ ರವಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ ಅವರು ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್ ಹೊಸಮನಿ, ಕೋಲಾರ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ನಿಖಿಲ್ ಬಿ, ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಕೆ.ಎಂ ಶಾಂತರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ವಿ ಅವರು ಭಾಗವಹಿಸುವವರು.