Home ಜಿಲ್ಲೆ ಹೆಡಗಾಪೂರ ಗ್ರಾಪಂನಲ್ಲಿ ವಿಶ್ವ ಪರಿಸರ ದಿನಾಚರಣೆ

ಹೆಡಗಾಪೂರ ಗ್ರಾಪಂನಲ್ಲಿ ವಿಶ್ವ ಪರಿಸರ ದಿನಾಚರಣೆ

ಔರಾದ್ :ಜೂ.6: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೆಡಗಾಪೂರ ಗ್ರಾಮ ಪಂಚಾಯತಿ ಆವರಣದಲ್ಲಿ ಶುಕ್ರವಾರ ಸಸಿ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನು ಪೆÇೀಷಿಸಿ ಬೆಳೆಸುವ ಸಂಕಲ್ಪ ಎಲ್ಲರೂ ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶರಣಪ್ಪ ಗಾದಗೆ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಬಳಿಕ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಶೇಷ ಗ್ರಾಮ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ನೀತಿ ಆಯೋಗದ ಎಬಿಪಿ ಫೆಲೋ ಆನಂದ್, ರಾಜೀವ ಗಾಂಧಿ ಫೆಲೋ
ಸಿದ್ದರಾಮೇಶ್ವರ್, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ, ಎನ್‍ಆರ್‍ಎಲ್‍ಎಂ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.