
ಲಕ್ಷೆö್ಮÃಶ್ವರ, ಜೂ೮: ಪಟ್ಟಣದ ಸರ್ಕಾರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಸಿ ನೆಡುವ ಮೂಲಕ ಮಾತನಾಡಿದ ನಿವೃತ್ತ ಸೈನಿಕ ಆ ಎಚ್ ಸಂಜೀವಣ್ಣ ಅವರು ಕಾಡು ಬೆಳೆಸಿ ನಾಡು ಉಳಿಸಿ ಕಾಡು ಉಳಿದರೆ ನಾಡು ಉಳಿಯುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಪರಿಸರ ಪ್ರಜ್ಞೆಯನ್ನು ಬೆಳೆಸಿಕೊಂಡು ಪರಿಸರದ ರಕ್ಷಣೆಯನ್ನು ಮಾಡಬೇಕು ಎಂದರು.
ಉಪಸ್ಥಿತರಿದ್ದ ವಿಶ್ರಾಂತ ಶಿಕ್ಷಕರಾದ ಐ ಎಸ್ ಮಡಿವಾಳರ ಮಾತನಾಡಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗತಿಕ ಜಾಗೃತಿ ಮೂಡಿಸುವುದು ಮತ್ತು ಪ್ರಕೃತಿಯನ್ನು ರಕ್ಷಿಸಲು ಜನರನ್ನು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಮಾತನಾಡಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏಕ್ ಪೇಡ್ ಮಾಕೆ ನಾಮ್ ೩.೦, ಅಭಿಯಾನವನ್ನು ಎಲ್ಲ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಎಚ್ ಡಿ ನಿಂಗರೆಡ್ಡಿ ಆರ್ ಎಂ ಶಿರಹಟ್ಟಿ ಎಲ್ ಎ ಬಣಕಾರ ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.



























