Home ಜಿಲ್ಲೆ ಕಲಬುರಗಿ ವಿಶ್ವ ತಂಬಾಕು ವಿರೋಧಿ ದಿನ ಆಚರಣೆ

ವಿಶ್ವ ತಂಬಾಕು ವಿರೋಧಿ ದಿನ ಆಚರಣೆ

ಕಲಬುರಗಿ,ಜೂ.1-ನಗರದ ಹೀರಾಪೂರ ಬಡಾವಣೆಯಲ್ಲಿ ಧರ್ಮಸ್ಥಳ ಮಂಜುನಾಥ ಸಮಿತಿಯ ಕಮಲಾಪುರ ವ್ಯಾಪ್ತಿಯ ವಲಯದ ಹಿರಾಪುರ ಕಾರ್ಯಕ್ಷೇತ್ರದ ಸ್ವಸಹಾಯ ಸಂಘದ ಸದಸ್ಯರಿಗೆ, ಮೇ 31ರ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ರವಿ ನೀಲೂರ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಾಲಕರು ತಮ್ಮ ಮಕ್ಕಳು ದುಶ್ಚಟ ದುರಭ್ಯಾಸಗಳಿಂದ ದೂರವಿರುವಂತೆ ನೋಡಿಕೊಳ್ಳಬೇಕು, ಮಕ್ಕಳನ್ನು ಸಮಾಜದಲ್ಲಿ ಉತ್ತಮ ನಾಗರಿಕರಾಗುವಂತೆ ಮಾಡುವುದರ ಮೂಲಕ ದುಶ್ಚಟ ಮುಕ್ತ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.
ಎಸ್‍ಡಿಎಂಸಿ ಅಧ್ಯಕ್ಷರಾದ ಜ್ಯೋತಿ ಅವರು ದುಶ್ಚಟ ಮುಕ್ತ ಸಮಾಜದ ಕುರಿತು ಸಂಘದ ಸದಸ್ಯರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲೆಯ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಅನಿಲ್ ಕುಮಾರ್ ಡಾಂಗೆ ಅವರು ವಹಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಡಾಂಗೆ , ತಾಲೂಕು ಕೃಷಿ ಮೇಲ್ವಿಚಾರಕರಾದ ಪ್ರಶಾಂತ, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.