Home ಜಿಲ್ಲೆ ವಿಶ್ವ ತಂಬಾಕು ರಹಿತ ದಿನಾಚರಣೆ

ವಿಶ್ವ ತಂಬಾಕು ರಹಿತ ದಿನಾಚರಣೆ

ಲಕ್ಷೆ÷್ಮÃಶ್ವರ,ಜೂ೨: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ ಶಿರಹಟ್ಟಿ ಮತ್ತು ಲಕ್ಷೆ÷್ಮÃಶ್ವರ ತಾಲೂಕ ಆಡಳಿತ ತಾಲೂಕ ಪಂಚಾಯಿತಿ ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಇವುಗಳ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೈದ್ಯಾಧಿಕಾರಿ ಶ್ರೀಕಾಂತ್ ಕಾಟೇ ವಾಲೆ ಅವರು ಜನರು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ತಂಬಾಕು ಸೇವನೆಯಿಂದ ಕ್ಯಾನ್ಸರ್ ನಂತಹ ಭೀಕರ ರೋಗಗಳು ಬರುವುದರಿಂದ ಅವುಗಳನ್ನು ತಿನ್ನುವ ಹವ್ಯಾಸವನ್ನು ಕೈಬಿಡಬೇಕು ಎಂದರು.


ಈ ಸಂದರ್ಭದಲ್ಲಿ ನ್ಯಾಯವಾದಿ ಪಿಎಂ ವಾಲಿಯವರು ಉಪನ್ಯಾಸ ನೀಡಿದರು ಕಾರ್ಯಕ್ರಮದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಹೀನಾ ಕೌಸರ್ ಗಂಜಿಹಾಳ ಆಸ್ಪತ್ರೆ ಸಿಬ್ಬಂದಿ ಮತ್ತು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು ಇದೇ ಸಂದರ್ಭದಲ್ಲಿ ವಿ ಶ್ವರಹಿತ ತಂಬಾಕು ದಿನದ ಬಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.


ಕೃಷ್ಣ ಕುಲಕರ್ಣಿ ಮತ್ತು ಹೂಗಾರ್ ನಿರ್ವಹಿಸಿದರು.