Home ಜಿಲ್ಲೆ ಬೆಂಗಳೂರು ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಮಾಲೂರು ಜೂ.೨೫ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಕೋಲಾರ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ತಾಲೂಕಿನ ಕೆ.ಎಲ್.ಇ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದಲ್ಲಿ ಬಿ.ಎಸ್.ಹಿರೇಮಠ್ ಮಾತನಾಡಿ ಧರ್ಮಸ್ಥಳ ಯೋಜನೆಯ ಮೂಲಕ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಜನರಲ್ಲಿ ದುಶ್ಚಟ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದು,ಜನರಲ್ಲಿ ಅರಿವು ಮೂಡಿಸಲಾಗುತಿದೆ. ಹಾಗೆ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಹಮ್ಮಿಕೊಂಡಿದ್ದು ತಂಬಾಕಿನ ದುಷ್ಪರಿಣಾಮಗಳ ಕುರಿತು ಹಾಗೂ ಸಮಾಜದ ಸ್ವಾಸ್ಥ್ಯಕ್ಕಾಗಿ ಇಂತಹ ಜಾಗೃತಿ ಕಾರ್ಯಕ್ರಮಗಳ ಮಹತ್ವವನ್ನು ತಿಳಿಸಿದರು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದ ಆರೋಗ್ಯ ಇಲಾಖೆಯ ಸುಮತಿ ಮತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ಗಂಭೀರ ಆರೋಗ್ಯ ಸಮಸ್ಯೆಗಳ ಕುರಿತು ವಿವರಿಸಿ ಇದರಿಂದ ಉಂಟಾಗುವ ಕ್ಯಾನ್ಸರ್, ಶ್ವಾಸಕೋಶದ ಕಾಯಿಲೆಗಳು ಮತ್ತು ಹೃದಯ ಸಂಬಂಧಿ ಸಮಸ್ಯೆಗಳ ಬಗ್ಗೆ ವಿವರಿಸಿದರು. ವ್ಯಸನದಿಂದ ದೂರವಿರಲು ಕೈಗೊಳ್ಳಬೇಕಾದ ಕ್ರಮಗಳು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಿಕೆ ಮತ್ತು ಮಾನಸಿಕ ದೃಢತೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಉತ್ತಮ ಆರೋಗ್ಯವೇ ಭಾಗ್ಯ, ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಏನು ಎಂಬುದನ್ನು ಮನವರಿಕೆ ಮಾಡಿಕೊಟ್ಟರು.


ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರು ಸುದರ್ಶನ್ ವೈ.ಎಂ, ಕೃಷಿ ಮೇಲ್ವಿಚಾರಕ ಶಿವಕುಮಾರ್, ಸ್ಥಳೀಯ ಸೇವಾ ಪ್ರತಿನಿಧಿ ಉಮಾ, ಮಂತೇಶ್, ಜನವಿಕಾಸ್ ಸಮನ್ವಯಾಧಿಖಾರಿ ಕೆ.ಬಿ.ರಜಿನಿ, ಶಿಕ್ಷಕರಾದ ಗೀತಾ ಬಿರಾದರ್, ಮಂಜುನಾಥ್, ನವೀನ್, ಜ್ಯೋತಿ, ಸುಲ್ತಾನ ಬೇಗಂ, ತಿಪ್ಪೆಸ್ವಾಮಿ, ಸೇವಾ ಪ್ರತಿನಿಧಿಗಳು ಆಶಾ, ಲಾವಣ್ಯ, ಸವಿತ, ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.