Home ಜಿಲ್ಲೆ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ


ಗದಗ,sಸೆ.೧೭: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಾಕ್ರಮ, ಕೆ. ಹೆಚ್ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಹಾಗೂ ಡಿ.ಜಿ.ಎಂ ಆರ್ಯುವೇದಿಕ ವೈದ್ಯಕೀಯ ಮಹಾವಿದ್ಯಾಲಯ ಗದಗ. ಇವರುಗಳ ಸಂಯುಕ್ತ ಆಶ್ರಯದಲ್ಲಿ. ಬುಧವಾರ ಡಿ.ಜಿ.ಎಂ ಆರ್ಯುವೇದಿಕ ವೈದ್ಯಕೀಯ ಮಹಾವಿದ್ಯಾಲಯ ಗದಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ-೨೦೨೬ ರ ಅಂಗವಾಗಿ ಕಾರ್ಯಕ್ರಮ ಜರುಗಿತು,
ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಕಂಡು ಬರುತ್ತಿದ್ದು. ಅದರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವುದು ಕಳವಳಕಾರಿಯಾಗಿದೆ ಎಂದು ಹೇಳಿ ಜೀವನ ಅತ್ಯಮೂಲ್ಯವಾದುದು ಹಾಗೂ ಆತ್ಮಹತ್ಯೆಗಳನ್ನು ತಡೆಗಟ್ಟುವಲ್ಲಿ ಯಾರು ಪ್ರಯತ್ನಿಸಿ ಯಶಸ್ವಿಯಾಗುತ್ತಾರೋ ಅವರು ದೇವರ ಕೆಲಸವನ್ನು ಮಾಡಿದ ಹಾಗೆ ಎಂದು ತಿಳಿಸಿ ಎಲ್ಲರೂ ಆತ್ಮಹತ್ಯೆಗಳನ್ನು ತಡೆಗಟ್ಟುವಲ್ಲಿ ಶ್ರಮಿಸಬೇಕೆಂದು ತಿಳಿಸಿದರು. ಹಾಗೂ ಆತ್ಮಹತ್ಯೆಗೆ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಆಗುತ್ತಿರುವ ಬದಲಾವಣೆಗಳು ಅಂದರೆ ಮಾನವ ಸಂಘಜೀವವನ್ನು ತೊರೆದು ಏಂಕಾಗಿತನದ ಕಡೆ ಹೋಗುತ್ತಿರುವುದು ಮುಖ್ಯ ಕಾರಣ ಎಂದು ತಿಳಿಸಿದರು. ಆತ್ಮಹತ್ಯೆ ಆಲೋಚನೆಗಳು ಬಂದAತಹ ಸಮಯದಲ್ಲಿ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆಯ ಸೇವೆ ಪಡೆಯಿರಿ ಹಾಗೂ ಟೆಲಿ-ಮನಸ್ ಉಚಿತ ಸಹಾಯವಾಣಿ ಸಂಖ್ಯೆ ೧೪೪೧೬ ಸಹಾಯ ಪಡೆಯಲು ತಿಳಿಸಿದರು. ಅಲ್ಲದೆ ಹದಿಹರೆಯದ ವಯಸ್ಸಿನ ಮಕ್ಕಳ ಕಡೆ ಹೆಚ್ಚು ಗಮನವನ್ನು ನೀಡುವುದು ಅವಶ್ಯಕ ಎಂದು ತಿಳಿಸಿ ಆತ್ಮಹತ್ಯೆ ತಡೆಗಟ್ಟುವಲ್ಲಿ ಅರಿವು ಮೂಡಿಸುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ನೀಲಗುಂದ ಕರ ಪತ್ರಗಳನ್ನು ಬಿಡುಗಡೆಗೊಳಿಸಿ ಆತ್ಮಹತ್ಯೆಗೆ ಹಲವಾರು ಕಾರಣಗಳಿದ್ದು ಅದರಲ್ಲಿ ಕೌಟುಂಬಿಕ ಸಮಸ್ಯೆ, ಪ್ರೀತಿ ಪ್ರೇಮಕ್ಕೆ ಸಂಬAಧಿಸಿದ ಸಮಸ್ಯೆ, ಸಮಸ್ಯೆ ನಿಭಾಯಿಸಲು ಬೇಕಾದ ಜೀವನ ಕೌಶಲ್ಯಗಳ ಕೊರತೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಕುಷ್ಠರೋಗ ನಿರ್ಮೂಲನ ಅಧಿಕಾರಿಗಳು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಜಿ.ಎಸ್ ಪಲ್ಲೆದ ಮಾತನಾಡಿ ಎಲ್ಲ ಗಣ್ಯ ಮಾನ್ಯರಿಗೆ ಸ್ವಾಗತಿಸಿ ಪ್ರಾಸ್ತಾವಿಕ ನುಡಿಯಲ್ಲಿ ಪ್ರತಿ ವರ್ಷ ಸೆಪೆಂಬರ್ ೧೦ ರಂದು ವಿಶ್ವದಾದ್ಯಂತ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ೨೦೦೩ ರಿಂದ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು. ಹಾಗೂ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಉದ್ದೇಶವನ್ನು ತಿಳಿಸಿದರು.


ಅತಿಥಿ ಉಪನ್ಯಾಸಕರಾಗಿ ಆಗಮಿಸಿದ ಡಾ. ಶ್ಯಾಮಸುಂದರ ಬಾಲೇಹೊಸುರ ಮನೋ ವೈದ್ಯರು ಮನೋವೈದ್ಯಕೀಯ ವಿಭಾಗ ಕೆ. ಹೆಚ್ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರು ಉಪನ್ಯಾಸದಲ್ಲಿ ಆತ್ಮಹತ್ಯೆಯ ವ್ಯಾಖ್ಯಾನ, ಕಾರಣ ಹಾಗೂ ತಡೆಗಟ್ಟುವಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ವಿವರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿ. ಈ ನಿಟ್ಟಿನಲ್ಲಿ ಎಲ್ಲ ವಿದ್ಯಾರ್ಥಿಗಳು ಅರಿವು ಮೂಡಿಸುವಲ್ಲಿ ಕಾರ್ಯಗತವಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ. ಎಸ್.ಎಮ್ ಬೆಳವಡಿ ಪ್ರಾಂಶುಪಾಲರು ಡಿ.ಜಿ.ಎಂ ಆರ್ಯುವೇದಿಕ ವೈದ್ಯಕೀಯ ಮಹಾವಿದ್ಯಾಲಯ ಇವರು ಅಧ್ಯಕ್ಷೀಯ ನುಡಿಯಲ್ಲಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆಗಳು ಹೆಚ್ಚಾಗುತ್ತಿದ್ದು ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಅತ್ಯವಶ್ಯಕ ಎಂದು ತಿಳಿಸಿದರು. ಹಾಗೂ ವಿದ್ಯಾರ್ಥಿಗಳು ಸಮಾಜದಲ್ಲಿ ಈ ಕುರಿತು ಅರಿವು ಮೂಡಿಸುವುದು ಅವಶ್ಯಕ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ ಇವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಮೆಲ್ವೀಚಾರಕರು ಆರ್ ಎಸ್ ಬಡ್ಡಿ, ತಾಲೂಕಾ ಆರೋಗ್ಯ ಶಿಕ್ಷಾಣಾಧಿಕಾರಿ ರಾಜೇಂದ್ರ ಗಡಾದ. ಕ್ಲಿನಿಕಲ್ ಸೈಕಾಲಜಿಸ್ಟ್ ಎಂ ಸಿ ಶ್ರೀಧರ. ಮತ್ತು ಸೈಕ್ಯಾಟ್ರಿಕ್ ಸೋಶಿಯಲ್ ವರ್ಕರ. ವಿನಾಯಕ .ಸಿ. ಕಾಳೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಡಿ.ಜಿ.ಎಂ ಆರ್ಯುವೇದಿಕ ವೈದ್ಯಕೀಯ ಮಹಾವಿದ್ಯಾಲಯ ಗದಗದ ವಿದ್ಯಾರ್ಥಿಗಳು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
ಕುಮಾರಿ ಸಾಧನಾ ಮತ್ತು ಮಾನಸಾ ಪ್ರಾರ್ಥಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್. ಡಿ ಬೆನ್ನೂರ ಕಾರ್ಯಕ್ರಮ ನಿರೂಪಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಎಫ್ ಹನಕನಹಳ್ಳಿ ವಂದಿಸಿದರು.