ವಿಶ್ವ ಪ್ರವಾಸೋದ್ಯಮ ದಿನ ಆಚರಣೆ

ಗದಗ, ಸೆ. 28: ಜಿಲ್ಲೆಯ ನೆಲ ಐತಿಹಾಸಿಕ ಪ್ರವಾಸಿ ತಾಣವಾಗಿದೆ ಎಂದು ಡಾ. ಎಚ್.ಕೆ. ಪಾಟೀಲ ಅವರು ಹೇಳಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪ್ರವಾಸೋದ್ಯಮ ಇಲಾಖೆ, ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ಇವರುಗಳ ಸಹಯೋಗದಲ್ಲಿ ವಿವಿ ಕೌಸಲ್ಯ ವಿಕಾಸ ಭವನದಲ್ಲಿ ಶನಿವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ರಾಜ್ಯ ಸರ್ಕಾರ ಪ್ರವಾಸೋಧ್ಯಮಕ್ಕೆ ತನ್ನದೇ ಆದ ನೀತಿ ಹೊಂದಿದೆ. ಪ್ರವಾಸೋಧ್ಯಮ ಆದಾಯದ ಮೂಲ ಅಂತ ಹೇಳ್ತಾರೆ. ಆದರೆ, ಪ್ರವಾಸೋಧ್ಯಮ ದುಡ್ಡಿಗಾಗಿ ಮಾಡುವುದಲ್ಲ. ಜನರ ಬದುಕಿನಲ್ಲಿ ಜ್ಞಾನಾರ್ಜನೆ ಮಾಡುವ ಕೇಂದ್ರವಾಗಿದೆ ಎಂದು ಹೇಳಿದರು.

ಭಾರತ ಪ್ರವಾಸೋಧ್ಯಮ ಕ್ಷೇತ್ರದಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ವಿದೇಶದಲ್ಲಿ ಜೋಗ ಜಲಪಾತ, ಶರಾವತಿ ಜಲಪಾತ, ಲಕ್ಕುಂಡಿಯ ಬಸ್ತಿ, ಬಾದಾಮಿ, ಐಹೋಳೆಯಲ್ಲಿರುವ ಐತಿಹಾಸಿಕ ದೇವಸ್ಥಾನಗಳು ಕಾಣಸಿಗುವುದಿಲ್ಲ. ಜಿಲ್ಲೆಯ 48 ತಾಣ ಸೇರಿ ರಾಜ್ಯದ 1200 ತಾಣಗಳು ಒಳಗೊಂಡು ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನದಲ್ಲಿದೆ. ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ರಾತ್ರಿ ವೇಳೆ ವಿಕ್ಷೀಸಲು ಅವಕಾಶ ಕಲ್ಪಿಸಿಕೊಡಲಾಗುವುದೆಂದು ಸಚಿವರು ತಿಳಿಸಿದರು.

ಇದೇ ವೇಳೆ ವಿವಿಧ ಸ್ಪರ್ದೆಗಳಲ್ಲಿ ಭಾಗವಹಿಸಿ ಜಯ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ. ಬಿ ಅಸೂಟಿ, ಸಿದ್ದು ಪಾಟೀಲ, ಪ್ರಭು ಬುರಬುರೆ, ವಿಶ್ವವಿದ್ಯಾಲಯದ ಕುಲಪತಿ ಪೆÇ್ರೀ. ಸುರೇಶ ನಾಡಗೌಡರ, ಜಿಲ್ಲಾಧಿಕಾರಿ ಸಿ. ಎನ್ ಶ್ರೀಧರ್, ಜಿಲ್ಲಾ ಪೆÇಲೀಸ್ ಅಧೀಕ್ಷಕ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಡಾ. ಶರಣು ಗೋಗೇರಿ, ಗಂಗಪ್ಪ ಎಂ, ಕೊಟ್ರೇಶ್ ವಿಭೂತಿ, ಪ್ರಶಾಂತ್ ಜೆ. ಸಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.