ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ಯೋಗ ದಿನಾಚರಣೆ

ಬೀದರ್:ಜೂ.೨೨: ನಗರದ ನೌಬಾದನ ಶ್ರೀ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಡಾ. ಎಂ.ಡಿ. ಅಲ್ತಾಫ್ ಹಾಗೂ ಡಾ. ಮಹೇಶ್ ರಾಜ್ ಯೋಗಾಭ್ಯಾಸ ಮಾಡಿಸಿದರು. ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಾಮೂಹಿಕವಾಗಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.
ಯಲ್ಲಾಲಿAಗ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಮುರಳಿಧರ ಎಕಲಾರಕರ್ ಮುಖ್ಯ ಅತಿಥಿಯಾಗಿದ್ದರು. ಕಾಲೇಜಿನ ಪ್ರಾಚಾರ್ಯ ಡಾ. ರೂಪೇಶ್ ಎಕಲಾರಕರ್, ಫಾರ್ಮಸಿ ಕಾಲೇಜು ಪ್ರಾಚಾರ್ಯ ಡಾ. ರಾಜಕುಮಾರ ಮತ್ತಿತರರು ಇದ್ದರು.