Home ಜಿಲ್ಲೆ ಯೋಗ ಒಂದು ಜೀವನ ಪದ್ಧತಿ: ಪ್ರೊ. ಎ.ಎಸ್. ಕಂದಗಲ

ಯೋಗ ಒಂದು ಜೀವನ ಪದ್ಧತಿ: ಪ್ರೊ. ಎ.ಎಸ್. ಕಂದಗಲ

ಜಮಖಂಡಿ, ಜೂ.21: ಯೋಗವು ದೇಹ, ಮನಸ್ಸು ಮತ್ತು ಆತ್ಮವನ್ನು ಸಮನ್ವಯಗೊಳಿಸಿ ಆರೋಗ್ಯ ಕಾಪಾಡಿಕೊಳ್ಳುವ ಹಾಗೂ ಆಂತರಿಕ ಶಾಂತಿಯನ್ನು ಅನುಭವಿಸುವ ಒಂದು ಜೀವನ ಪದ್ಧತಿಯಾಗಿದೆ ಎಂದು ಯೋಗಗುರು ಹಾಗೂ ನಿವೃತ್ತ ಪ್ರಾಧ್ಯಾಪಕ ಎ.ಎಸ್. ಕಂದಗಲ ಹೇಳಿದರು.

ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ನಡೆದ 12ನೇ ವಿಶ್ವಯೋಗ ದಿನಾಚರಣೆಯಲ್ಲಿ ಯೋಗಾಸನಗಳ ಪ್ರಾತ್ಯಕ್ಷಿಕೆ ನೀಡಿ ಅವರು ಮಾತನಾಡಿದರು.

ಸೂರ್ಯ ನಮಸ್ಕಾರ ಮಾಡುವುದರಿಂದ ರಕ್ತಸಂಚಲನ ಸುಧಾರಿಸುತ್ತದೆ, ದೇಹದ ತೂಕ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ ಹಾಗೂ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ ಎಂದು ತಿಳಿಸಿದರು.

ಪ್ರಾಚಾರ್ಯ ಡಾ. ಟಿ.ಪಿ. ಗಿರಡ್ಡಿ ಮಾತನಾಡಿ, ಮನಸ್ಸಿನ ಏಕಾಗ್ರತೆ ಸಾಧಿಸಲು ಹಾಗೂ ಸ್ಮರಣಶಕ್ತಿಯನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಪೆÇ್ರ. ಬಸವರಾಜ ಕಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಡಾ. ಗಿರೀಶ ಕಡ್ಡಿ, ಮುಖ್ಯ ಶಿಕ್ಷಕ ಪಿ.ಐ. ಹೊಸಮಠ ಉಪಸ್ಥಿತರಿದ್ದರು.
ಸಂಭ್ರಮ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. 5ನೇ ತರಗತಿ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರದರ್ಶನ ನೀಡಿದರು. ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.

ವಿಮಲಾ ಚೌಧರಿ ಮತ್ತು ಆರಾಧ್ಯ ಬಳ್ಳೂರಗಿ ಕಾರ್ಯಕ್ರಮ ನಿರೂಪಿಸಿದರು. ಶ್ರೀದೇವಿ ಬಡಿಗೇರ ವಂದಿಸಿದರು.