Home ಜಿಲ್ಲೆ ತುಮಕೂರು ದೈಹಿಕ-ಮಾನಸಿಕ ನೆಮ್ಮದಿಗೆ ಯೋಗ ಅವಶ್ಯ

ದೈಹಿಕ-ಮಾನಸಿಕ ನೆಮ್ಮದಿಗೆ ಯೋಗ ಅವಶ್ಯ

ಸಿರಾ, ಜೂ. ೨೩- ಇಂದಿನ ಒತ್ತಡದ ಆಧುನಿಕ ಜೀವನ ಶೈಲಿಯಲ್ಲಿ ಪ್ರತಿಯೊಬ್ಬರೂ ದೈಹಿಕ ದೃಢತೆ ಹಾಗೂ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಯೋಗ ಅತ್ಯಗತ್ಯ ಎಂದು ವಿ ಪ ಸದಸ್ಯ ಹಾಗೂ ಭಾ.ಜ.ಪ ಮಧುಗಿರಿ ಸಂಘಟನಾತ್ಮಕ ಜಿಲ್ಲಾಧ್ಯಕ್ಷ ಚಿದಾನಂದ್ ಎಂ. ಗೌಡ ಹೇಳಿದರು.


ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದ ‘ಬರಗೂರು ರಾಮಚಂದ್ರಪ್ಪ ಬಯಲು ರಂಗ ಮಂದಿರ’ದಲ್ಲಿ ನಡೆದ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯೋಗವು ಕೇವಲ ಒಂದು ದಿನದ ಆಚರಣೆಯಾಗದೇ, ಪ್ರತಿಯೊಬ್ಬ ನಾಗರಿಕರ ನಿತ್ಯ ಜೀವನದ ಶಿಸ್ತಾಗಬೇಕು. ಸದೃಢ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.


ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಬರಗೂರು ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಂಜಲಗೆರೆ ಮೂರ್ತಿ, ಜಿಲ್ಲಾ ಉಪಾಧ್ಯಕ್ಷರಾದ ಚಿಕ್ಕಣ್ಣ, ಜಿಲ್ಲಾ ಕಾರ್ಯದರ್ಶಿ ಪದ್ಮ ಮಂಜುನಾಥ್, ಗ್ರಾಮಂತರ ಮಂಡಲ ಅಧ್ಯಕ್ಷರಾದ ಈರಣ್ಣ ಪಟೇಲ್, ಉಪಾಧ್ಯಕ್ಷರಾದ ಲೋಕೇಶ್, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ್, ಭಾಸ್ಕರ್, ನಗರ ಯುವ ಮೋರ್ಚಾ ಅಧ್ಯಕ್ಷೆ ಸ್ನೇಹಪ್ರಿಯ ಶಿವು, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ತಡಕಲೂರು ಹರೀಶ್, ಮಹಿಳಾ ಮೋರ್ಚಾ ಮಂಜುಳ, ಕೌಸಲ್ಯ, ಉಷಾ, ಸುಶೀಲಮ್ಮ ಮತ್ತಿತರರು ಉಪಸ್ಥಿತರಿದ್ದರು.