
ಭಾಲ್ಕಿ:ಜೂ.೨೨: ತಾಲೂಕಿನ ಭಾತಂಬ್ರಾ ಗ್ರಾಮದ ಹಾನಗಲ್ ಗುರುಕುಮಾರೇಶ್ವರ ಧ್ಯಾನ ಯೋಗ ಮಂದಿರದಲ್ಲಿ ಭಾನುವಾರ ಅಂತರ ರಾಷ್ಟಿçÃಯ ಯೋಗ ದಿನಾಚರಣೆ ಆಚರಿಸಲಾಯಿತು. ಸಾನ್ನಿಧ್ಯ ವಹಿಸಿದ್ದ ಜಗದ್ಗುರು ನಿರಂಜನ ಸಂಸ್ಥಾನ ಮಠದ ಜಗದ್ಗುರು ಶಿವಯೋಗೀಶ್ವರ ಸ್ವಾಮೀಜಿ ಮಾತನಾಡಿ, ಯೋಗ ಆರೋಗ್ಯದ ಶ್ರೇಷ್ಠ ಸಂಪತ್ತಾಗಿದೆ. ಉತ್ತಮ ಜೀವನ ಶೈಲಿ ಮೈಗೂಡಿಸಿಕೊಳ್ಳಲು ಪ್ರತಿಯೊಬ್ಬರು ಯೋಗ, ಪ್ರಾಣಾಯಾಮ, ಧ್ಯಾನ ಮಾಡಬೇಕು ಎಂದು ಸಲಹೆ ನೀಡಿದರು.
ಯೋಗ ಶಿಕ್ಷಕ ರಾಜಕುಮಾರ ಪಾಟೀಲ ಅವರು ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ಮಾಡಿಸಿ, ಯೋಗದಿಂದ ದೇಹದ ಆರೋಗ್ಯ, ಮನಸ್ಸಿನ ಏಕಾಗ್ರತೆ ಮತ್ತು ಒತ್ತಡ ನಿವಾರಣೆಗೆ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ಯೋಗ ದಿನಾಚರಣೆಯ ಅಂಗವಾಗಿ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಅರಿವು ಮೂಡಿಸಲಾಯಿತು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.






























