Home Lead News ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ದೋಷಿ

ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ದೋಷಿ

ಬೆಂಗಳೂರು, ಏ.15- ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು‌ ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.


ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ.


ಹತ್ಯೆ ಪ್ರಕರಣದಲ್ಲಿ 21 ಮಂದಿ ದೋಷಿಗಳಿದ್ದಾರೆ ಎಂದು ಹೇಳಿರುವ ನ್ಯಾಯಾಲಯ, 20 ಹಾಗೂ 21ನೇ ಆರೋಪಗಳನ್ನು ಖುಲಾಸೆಗೊಳಿಸಿ ಉಳಿದ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ.


2016 ರಲ್ಕಿ ಈ ಹತ್ಯೆ ನಡೆದಿದ್ದಾಗ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರು. ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿನಯ್‌ ಕುಲಕರ್ಣಿ ಹೆಸರು ಕೇಳಿ ಬಂದಿದ್ದರಿಂದ ವ್ಯಾಪಕ ಚರ್ಚೆಗೂ ಎಡೆಮಾಡಿಕೊಟ್ಟಿತ್ತು.


ಈ ಪ್ರಕರಣ ಕುರಿತು ತನಿಖೆ ಕೈಗೊಂಡಿದ ಸಿಬಿಐ ವಿನಯ್ ಕುಲಕರ್ಣಿ ಅವರನ್ನು 15ನೇ ಆರೋಪಿಯನ್ನಾಗಿ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿತ್ತು.


ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ 2016ರಲ್ಲಿ ಜಿಲ್ಲಾಪಂಚಾಯತ್ ಸಭಾ ಭವನದಲ್ಲಿ ಸಚಿವ ವಿನಯ್ ಅವರೊಂದಿಗೆ ತೀವ್ರ ಮಾತಿನ ಚಕಮಕಿ ನಡೆದಿತ್ತು.


ಜೂನ್‌ 15 ರಂದು ಯೋಗೇಶ್‌ ಗೌಡ ಧಾರವಾಡದ ಸಪ್ತಾಪೂರದ ಉದಯ್ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.