
ಜೇವರ್ಗಿ, ಡಿ.22- ತಾಲೂಕಿನ ಕೂಟನೂರ ಗ್ರಾಮದ ಯುವ ರೈತ ಆನಂದ್ ಸಿದ್ದಪ್ಪ ತುರಾಯಿ (30) ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಜೇವಗಿ ಪೊಲೀಸ ಠಾಣೆಯಲ್ಲಿ ದಾಖಲಾಗಿದೆ.
ವಿಷಕಾರಿ ಕಿಟನಾಶಕ ಹತ್ತಿ ಬೆಳೆಗೆ ಸಿಂಪಡಿಸುವ ಎಣ್ಣೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದ್ದು, ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

























