ಕೈಕೊಟ್ಟ ಯುವತಿ ಬಾಡಿ ಬಿಲ್ಡರ್ ಆತ್ಮಹತ್ಯೆ

ಬೆಂಗಳೂರು,ಫೆ.೮- ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ನೊಂದ ಬಾಡಿ ಬಿಲ್ಡರ್ ಆತ್ಮಹತ್ಯೆ ನಾಡಿಕೊಂಡಿರುವ ದಾರುಣಘಟನೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ.


ಮಹಾಲಕ್ಷ್ಮೀ ಲೇಔಟ್ ನ ಬಾಡಿ ಬಿಲ್ಡರ್ ಕಿರಣ್(೨೬)ಆತ್ಮಹತ್ಯೆ ಮಾಡಿಕೊಂಡವರು, ಕಳೆದ ೩ ವರ್ಷಗಳಿಂದ ಯುವತಿಯೊಬ್ಬಳನ್ನು ಕಿರಣ್ ಪ್ರೀತಿಸುತ್ತಿದ್ದರು. ಆದರೆ ಯುವತಿಗೆ ಬೇರೆ ಯುವಕನ ಜತೆ ಮದುವೆ ನಿಶ್ಚಯವಾದ ಕಾರಣ, ಯುವತಿ ಹಾಗೂ ಆಕೆಯ ತಾಯಿ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ತನಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿದೆ ಎಂದು ಯುವತಿ ಕಿರಣ್??ಗೆ ಹೇಳಿದ್ದಲ್ಲದೆ ಮದುವೆಯ ಆಮಂತ್ರಣ ಪತ್ರಿಕೆ, ಹೊಸ ಸೀರೆ ತೋರಿಸಿದ್ದಳು. ಇದರಿಂದ ಮನನೊಂದು ನೇರವಾಗಿ ಮನೆಗೆ ಬಂದು ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀಲೇಔಟ್ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.


ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿ , ಬಾಡಿ ಬಿಲ್ಡಿಂಗ್ ಮಾಡುತ್ತಿದ್ದ ಕಿರಣ್, ಪ್ರಿಯತಮೆಗೆ ಪ್ರೇಮಿಗಳ ದಿನಾಚರಣೆಗೆ ಗಿಫ್ಟ್ ಕೊಡಲು ಸಹ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ನಡುವೆ ಪ್ರೇಯಸಿ ಮತ್ತೊಬ್ಬನ ಜೊತೆ ಮದುವೆ ವಿಷಯ ಪ್ರಸ್ತಾಪಿಸಿದ ಕಾರಣ ಆಘಾತಕೊಳ್ಳಗಾಗಿದ್ದ ಕಿರಣ್?? ದುಡುಕಿನ ನಿರ್ಧಾರ ಮಾಡಿದ್ದಾರೆ.


ಇನ್ನು ಪ್ರಿಯತಮೆ ಮದುವೆ ವಿಚಾರ ತಿಳಿದು ಬೇಸರದಲ್ಲಿ ಮನೆಗೆ ಬಂದಿದ್ದ ಕಿರಣ್ ನಿನ್ನೆ ಸಂಜೆ ತಾಯಿಯನ್ನ ವೈಟ್ ಶೀಟ್ ಮತ್ತು ಪೆನ್ ಕೇಳಿದ್ದರು. ಇದರಿಂದ ಅನುಮಾನಗೊಂಡ ತಾಯಿ ಯಾಕಪ್ಪಾ ವೈಟ್ ಹಾಳೆ ಎಂದು ವಿಚಾರಿಸಿದಾಗ, ಹೆದರಬೇಡಮ್ಮ ಫೈನಾನ್ಸ್ ಲೆಕ್ಕ ಬರೀತಿನಿ ಎಂದು ಕಿರಣ್ ಹೇಳಿದ್ದರಂತೆ. ಘಟನೆ ಸಂಬಂಧ ಸದ್ಯ ಯುವತಿ ಹಾಗೂ ಕುಟುಂಬಸ್ಥರ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಠಾಣೆಗೆ ಕಿರಣ್ ಕುಟುಂಬಸ್ಥರು ದೂರು ನೀಡಿದ್ದು, ತನಿಖೆ ಮುಂದುವರಿದಿದೆ.