
ಮುದ್ದೇಬಿಹಾಳ: ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ತನ್ನ ಮನೆಯಲ್ಲೇ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಭೀಕರ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರೂಢಗಿ ಗ್ರಾಮದಲ್ಲಿ ಬುಧವಾರ ಬೆಳಕಿಗೆ ಬಂದಿದೆ.
ಮೃತನನ್ನು ಗಣೇಶ ಬಸಪ್ಪ ಕೋಲಕಾರ (ಅಂಬಿಗೇರ) (27) ಎಂದು ಗುರುತಿಸಲಾಗಿದೆ. ಈತನ ಪತ್ನಿ ಪೂಜಾ (ಅಕ್ಷತಾ) ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿ, ಮೃತನ ಸಹೋದರಿ ಮುತ್ತಕ್ಕ ಸುರೇಶ ಮನಗೂಳಿ ಅವರು ಮುದ್ದೇಬಿಹಾಳ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪತ್ನಿ-ಪ್ರಿಯಕರನ ವಿರುದ್ಧ ಅನುಮಾನ:
ಗಣೇಶನು ಕಿರಾಣಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು. ಮುದ್ದೇಬಿಹಾಳದ ಆಶ್ರಯ ಕಾಲೋನಿಯ ನಾಗರಾಜ ಯಮನಪ್ಪ ಅಂಬಿಗೇರ ಅವರ ಪುತ್ರಿ ಪೂಜಾಳೊಂದಿಗೆ ಸುಮಾರು ಆರು ತಿಂಗಳ ಹಿಂದೆ ಆತನ ವಿವಾಹವಾಗಿತ್ತು.
ಮದುವೆಯಾದ ಕೆಲವೇ ದಿನಗಳ ನಂತರ ಪೂಜಾ ಯಾರೊಂದಿಗೋ ಆಗಾಗ್ಗೆ ಮೊಬೈಲ್ ಫೆÇೀನ್ನಲ್ಲಿ ಮಾತನಾಡುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ಗಣೇಶನಿಗೆ ಅನುಮಾನ ಮೂಡಿತ್ತು. ಈ ಬಗ್ಗೆ ಆತ ಪ್ರಶ್ನಿಸಿದಾಗ, ಪೂಜಾ ಆತನೊಂದಿಗೆ ವಾಗ್ವಾದ ನಡೆಸುತ್ತಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪೂಜಾ ಬೇರೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಅಕ್ಟೋಬರ್ 20ರ ರಾತ್ರಿ ಕೂಡ ಇಬ್ಬರ ನಡುವೆ ಜಗಳ ನಡೆದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮನೆಯಲ್ಲೇ ಶವವಾಗಿ ಪತ್ತೆ:
ಅಕ್ಟೋಬರ್ 21ರಂದು ಬೆಳಿಗ್ಗೆ ಗಣೇಶನ ಮನೆಗೆ ತೆರಳಿ ನೋಡಿದಾಗ, ಆತ ಕತ್ತು ಸೀಳಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಘಟನೆಯ ಬಳಿಕ ಪತ್ನಿ ಪೂಜಾ ಮನೆಯಲ್ಲಿ ಇರಲಿಲ್ಲ. ಆಕೆಯನ್ನು ವಿವಿಧೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಮೃತನ ಸಹೋದರಿ ದೂರಿನಲ್ಲಿ ತಿಳಿಸಿದ್ದಾರೆ.
ಮಾಹಿತಿ ತಿಳಿದ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮುದ್ದೇಬಿಹಾಳ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು.
ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿ ಪೂಜಾ ಹಾಗೂ ಆಕೆಯ ಪ್ರಿಯಕರ ಎನ್ನಲಾದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಇಬ್ಬರೂ ಗ್ರಾಮದಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಅವರ ಪತ್ತೆಗಾಗಿ ಪೆÇಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.
ಘಟನೆಯ ಕುರಿತು ಪೆÇಲೀಸರು ತನಿಖೆ ಮುಂದುವರಿಸಿದ್ದು, ಹತ್ಯೆಯ ಹಿಂದಿನ ನಿಖರ ಕಾರಣ ಹಾಗೂ ಆರೋಪಿಗಳ ಪಾತ್ರ ತನಿಖೆಯಿಂದ ತಿಳಿದುಬರಬೇಕಿದೆ.






















