
ಕಲಬುರಗಿ,ಸೆ.5-ನೇಣು ಹಾಕಿಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಲಗತ್ತಿ ರಸ್ತೆಯ ಸೋನಿಯಾಗಾಂಧಿ ಕಾಲೋನಿಯಲ್ಲಿ ನಡೆದಿದೆ.
ಆಮೀನಾ ಮೇಹರಿನ್ ತಂದೆ ಅಲಿಸಾಬ್ (18) ಆತ್ಮಹತ್ಯೆ ಮಾಡಿಕೊಂಡವರು.
ಸಿಟ್ಟಿನ ಸ್ವಭಾವದವಳಾಗಿದ್ದ ಆಮೀನಾ ಮೇಹರಿನ್ ಆಗಾಗ ಸಣ್ಣಪುಟ್ಟ ವಿಚಾರಕ್ಕೆ ಸಿಟ್ಟು ಮಾಡಿಕೊಂಡು ಒಬ್ಬಂಟಿಯಾಗಿ ಮನೆಯ ಕೊಂಡಿ ಹಾಕಿಕೊಂಡು ರೂಮಿನಲ್ಲಿ ಇರುತ್ತಿದ್ದಳು. ಸೆ.3 ರಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೆ.4 ರಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ ಎಂದು ಮೃತಳ ತಂದೆ ಅಲಿಸಾಬ್ ಅವರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.