
ಹಾಸನ,ಮೇ.೨೨-ಹೊಳೆನರಸೀಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ್ದಾಳೆ.
ಮೃತಳನ್ನು ಸಂಧ್ಯಾ (೧೯) ಎಂದು ಗುರುತಿಸಲಾಗಿದೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬ್ಲಾಕ್ ನಿವಾಸಿಗಳಾದ ವೆಂಕಟೇಶ್ ಮತ್ತು ಪೂರ್ಣಿಮಾ ದಂಪತಿಯ ಪುತ್ರಿ ಸಂಧ್ಯಾ, ಡಿಪ್ಲೊಮಾದ ಅಂತಿಮ ವರ್ಷವನ್ನು ಪೂರ್ಣಗೊಳಿಸಿದ್ದಳು.
ಸಂಧ್ಯಾ ಸ್ನಾನಗೃಹದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾಳೆ. ಪೋಷಕರು ತಕ್ಷಣ ಸ್ನಾನಗೃಹದ ಬಾಗಿಲು ಒಡೆದು ಸಂಧ್ಯಾಳನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಸಂಧ್ಯಾ ಮೃತಪಟ್ಟಿದ್ದಾಳೆ.
ಸಂಧ್ಯಾ ಕೆಲವು ವರ್ಷಗಳಿಂದ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.