ಕಲಬುರಗಿ :ಅ.13: ಯಾವುದೇ ಒಂದು ರಾಷ್ಟ್ರದ ಅಭಿವೃದ್ದಿಯಲ್ಲಿ ಅಲ್ಲಿನ ಯುವಕರ ಪಾತ್ರ ಮಹತ್ತರವಾಗಿದೆ. ಯುವಶಕ್ತಿ ಸದುಪಯೋಗ ಮಾಡಿಕೊಂಡು, ಅದನ್ನು ದೇಶದ ಪ್ರಗತಿಗೆ ಬಳಸಿಕೊಳ್ಳಬೇಕು. ಯುವಕರು ವಿಶ್ವದ ಭವಿಷ್ಯವಾಗಿದ್ದಾರೆ ಎಂದು ಉಪನ್ಯಾಸಕ ಹಾಗೂ ಸಮಾಜ ಸೇವಕ ಎಚ್.ಬಿ.ಪಾಟೀಲ್ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ‘ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆ’ಯಲ್ಲಿ ಕಲಬುರಗಿಯ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಸಾರಲು ಈ ದಿನಾಚರಣೆ ಪೂರಕವಾಗಿದೆ. ಯುವಕರನ್ನು ಒಗ್ಗೂಡಿಸುವುದು ಮತ್ತು ಸಾಮಾಜಿಕ, ಆರ್ಥಿಕ ಮತ್ತು ಎಲ್ಲಾ ರೀತಿಯ ಅಭಿವೃದ್ಧಿಯಲ್ಲಿ ಅವರು ಕೊಡುಗೆಯನ್ನು ಗುರುತಿಸುವುದು ಮತ್ತು ಎಲ್ಲಾ ಕ್ಷೇತ್ರದಲ್ಲೂ ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸಿ, ಪೆÇ್ರೀತ್ಸಾಹಿಸಿದರೆ, ಯುವಜರು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು. ಕಾಲೇಜಿನ ಪ್ರಾಚಾರ್ಯ ಡಾ.ಜಗನಾಥ ಕಾವಳೆ ಮಾತನಾಡಿ, ಪ್ರಪಂಚದಾದ್ಯಂತ ಯುವಕರು ಎದುರಿಸುತ್ತಿರುವ ಸವಾಲುಗಳನ್ನು ಗುರುತಿಸುವುದು ಮತ್ತು ಅವುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುಬೇಕು. ಯುವಕರನ್ನು ಸಬಲೀಕರಣಗೊಳಿಸಬೇಕು. ದೇಶದ ಜನಸಂಖ್ಯೆಯಲ್ಲಿ ಬಹುಪಾಲು ಯುವಕರಿದ್ದರೆ, ಆ ದೇಶದ ಅಭಿವೃದ್ಧಿ ಅತ್ಯಂತ ವೇಗವಾಗಿ ಸಾಗುತ್ತದೆ. ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯುವ ಹೋರಾಟಗಾರರ ಪಾತ್ರ ಅವಿಸ್ಮರಣೀಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಯಡ್ರಾಮಿ ಕದಂಬ ಪಿಯು ಕಾಲೇಜಿನ ಪ್ರಾಚಾರ್ಯ ದೇವಿಂದ್ರ ಬಿ.ಗುಡುರ್, ಶಾಲೆಯ ಶಿಕ್ಷಕರಾದ ಕೊತ್ಲಪ್ಪ ಚವಾರ್, ಶ್ರೀಶೈಲ ಮೈದರ್ಗಿ, ನಿಂಗಣ್ಣ ಪೂಜಾರಿ, ಮಲ್ಲಿಕಾರ್ಜುನ ಶಿರೊಳ್ಳಿ, ಶರಣಗೌಡ ಬಿರಾದಾರ, ರಮೇಶ್ ಬಿರಾದಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.






















