Home ಜಿಲ್ಲೆ ಕಲಬುರಗಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ನದಿಗೆ ಹಾರಿ ಯುವಕ ಆತ್ಮಹತ್ಯೆ

ಕಲಬುರಗಿ,ಫೆ.12-ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನಗರದ ಹೊರವಲಯದಲ್ಲಿರುವ ಕುರಿಕೋಟಾ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ನಗರದ ರೇವಣಸಿದ್ದೇಶ್ವರ ಕಾಲೋನಿಯ ನಿವಾಸಿ ಮಲ್ಲಿಕಾರ್ಜುನ ರಾಚಪ್ಪ ಪಾಟೀಲ್ (36) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮಲ್ಲಿಕಾರ್ಜುನ್ ಪಾಟೀಲ್ ಸೋಮವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆಯಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಹಾಗಾಂವ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.