
ಧಾರವಾಡ, ಅ.17: ಯುವಕರು ದೇಶದ ಶಕ್ತಿ ಮತ್ತು ಭವಿಷ್ಯ. ಸಮಾಜದ ಪ್ರಗತಿ ಯುವ ಪೀಳಿಗೆಯ ಚಿಂತನೆ ಮತ್ತು ನೈತಿಕತೆಗೆ ಅವಲಂಬಿತವಾಗಿದೆ. ಇಂತಹ ಯುವಜನೋತ್ಸವಗಳು ಯುವಕರಲ್ಲಿ ಸ್ಪರ್ಧಾತ್ಮಕ ಮನೋಭಾವನೆ, ಸೃಜನಶೀಲತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ವೇದಿಕೆಗಳಾಗಿವೆ. ವಿದ್ಯಾಭ್ಯಾಸದ ಜೊತೆಗೆ ಕಲೆ, ಕ್ರೀಡೆ ಹಾಗೂ ಸಾಂಸ್ಕøತಿಕ ಕ್ಷೇತ್ರಗಳಲ್ಲಿ ತೊಡಗಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಗುಂಜನ್ ಆರ್ಯ ಅವರು ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದ ಜೆ.ಎಸ್.ಎಸ್.ಕಾಲೇಜಿನ ಉತ್ಸವ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಯುವಜನೋತ್ಸವ ಉದ್ಘಾಟಿಸಿ, ಮಾತನಾಡಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ ಯುವಕರು ತಮ್ಮ ಸಮಯ ಮತ್ತು ಶಕ್ತಿಯನ್ನು ಸಕಾರಾತ್ಮಕ ದಿಕ್ಕಿನಲ್ಲಿ ಬಳಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮ, ವಿಜ್ಞಾನ ಮತ್ತು ಹೊಸ ಆವಿμÁ್ಕರಗಳನ್ನು ಸಮಾಜದ ಹಿತಕ್ಕಾಗಿ ಉಪಯೋಗಿಸಬೇಕು. ಇದರಿಂದ ಯುವಸಮುದಾಯದ ಸಬಲೀಕರಣವಾಗುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಆರೋಗ್ಯ ಚಟುವಟಿಕೆಗಳನ್ನು ಹೆಚ್ಚಿಸುವಲ್ಲಿ ಕ್ರೀಡಾ ಮನೋಬಾವನೆ ಮಹತ್ವದ ಪಾತ್ರ ವಹಿಸುತ್ತದೆ. ವಿವಿಧ ರೀತಿಯ ಕ್ರೀಡೆಗಳು ನಮ್ಮ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಸದೃಡಗೊಳಿಸುತ್ತದೆ. ದೈಹಿಕ ಆಯಾಸದಿಂದ ಉಂಟಾಗುವ ಸುಖ ನಿದ್ರೆಯು ದೈಹಿಕ ಸೌಂದರ್ಯವನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.
ಯುವಜನೋತ್ಸವಗಳು ಯುವಕರಲ್ಲಿ ಒಗ್ಗಟ್ಟು, ಬದ್ಧತೆ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುತ್ತವೆ. ಯುವಕ ಯುವತಿಯರಲ್ಲಿ ಅಡಗಿರುವ ಕ್ರೀಡಾ ಹಾಗೂ ಸಾಂಸ್ಕøತಿಕ ಪ್ರತಿಭೆಗಳನ್ನು ಸಮಾಜಕ್ಕೆ ಪರಿಚಯಿಸುತ್ತವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ ಅವರು ಮಾತನಾಡಿ, ಸರ್ಕಾರವು ಯುವಕರ ಬೆಳವಣಿಗೆಗಾಗಿ ವಿವಿಧ ಯೋಜನೆಗಳನ್ನು ರೂಪಿಸಿದೆ. ಅವುಗಳ ಕುರಿತು ಅರಿವು ಮೂಡಿಸುವುದು ಈ ಉತ್ಸವದ ಪ್ರಮುಖ ಉದ್ದೇಶ. ಕಲೆ, ಕ್ರೀಡೆ ಮತ್ತು ಸಂಸ್ಕೃತಿಯ ಚಟುವಟಿಕೆಗಳು ಯುವಕರಲ್ಲಿ ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತವೆ. ಪ್ರತಿಯೊಬ್ಬ ಯುವಕರು ತಮ್ಮ ಸಾಮಥ್ರ್ಯವನ್ನು ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮೀಣ ಹಾಗೂ ನಗರ ಪ್ರದೇಶದ ಯುವಕರು ತಮ್ಮ ಪ್ರತಿಭೆಯನ್ನು ಗುರುತಿಸಿ ಬೆಳೆಸಿಕೊಳ್ಳಲು ಇಂತಹ ಯುವಜನೋತ್ಸವಗಳು ಉತ್ತಮ ವೇದಿಕೆಯಾಗಿವೆ. ಯುವಕರು ತಮ್ಮೊಳಗಿನ ಶಕ್ತಿಯನ್ನು ಅರಿತುಕೊಂಡು ಅದನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿದಾಗ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ಸಬಲೀಕರಣವಾಗುತ್ತದೆ ಎಂದು ಹೇಳಿದರು.
ಕೇವಲ ಓದುವುದು ಮಾತ್ರವಲ್ಲದೆ, ಅದರ ಜೊತೆಗೆ ಕೌಶಲ್ಯಗಳನ್ನು ರೂಡಿಸಿಕೊಳ್ಳುವುದು ಅμÉ್ಟೀ ಮುಖ್ಯವಾಗಿದೆ. ಹಾಗೂ ಯಾವುದೇ ಒಂದು ಕೆಲಸ ಮಾಡಬೇಕಾದರೆ ನಿರ್ದಿಷ್ಟವಾದ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಮಾತನಾಡಿ, ಜೀವನದಲ್ಲಿ ಸೋಲು ಗೆಲುವು ಇದ್ದೇ ಇರುತ್ತವೆ. ಆದರೆ ಆ ಸೋಲುಗಳನ್ನು ಸಹ ಸಕಾರಾತ್ಮಕವಾಗಿ ತೆಗೆದುಕೊಂಡಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪೂರ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಜಿನ್ನಪ್ಪ ಅವರು ವಂದಿಸಿದರು.
ವೇದಿಕೆಯಲ್ಲಿ ಧಾರವಾಡ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಂಗಾಧರ ಕಂದಕೂರ, ಕರ್ನಾಟಕ ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಕಾರ್ಯಕ್ರಮ ಸಂಯೋಜಕ ಡಾ. ಎಂ. ಜಿ. ದಳಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಸ್.ಎಂ ಹಿರೇಮಠ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜಿನ ಪ್ರಾಧ್ಯಾಪಕರು, ಶಿಕ್ಷಕರು, ಎನ್.ಎಸ್.ಎಸ್. ಸ್ವಯಂ ಸೇವಕರು, ಯುವಕ ಯುವತಿ ಮಂಡಳಗಳ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.





























