
ಚಿತ್ತಾಪುರ;ಮೇ.14: ಹಳೆಯ ವೈಷಮ್ಯ ಹಿನ್ನೆಲೆ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ಮಲ್ಲಪ್ಪ ಹುಳಗೊಳರ್ (25) ಕೊಲೆಯಾದ ಯುವಕ. ಘಟನೆಯ ಸುದ್ದಿ ತಿಳಿಯುತ್ತಿದಂತೆ
ಎಸ್ಪಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಪಿಎಸ್’ಐ ಮಂಜುನಾಥ ರೆಡ್ಡಿ ಸೇರಿದಂತೆ ಪೆÇಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳವಾರ ರಾತ್ರಿ ಗ್ರಾಮದ ಕೆರೆಯ ಹತ್ತಿರ ಸಿದ್ದಪ್ಪ ಅವರ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ
ಕೊಲೆಯಾದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಒಪ್ಪಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆÇಲೀಸರು ತನಿಖೆ ಚುರುಕುಗೊಳಿಸಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಚಿತ್ತಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.























