ಯುವ ಸಂಸತ್ ಸ್ಪರ್ಧೆ


ಹುಬ್ಬಳ್ಳಿ,ನ.೪: ಇಂದು ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಧಾರವಾಡ, ಶಾಲಾ ಶಿಕ್ಷಣ ಇಲಾಖೆ ಧಾರವಾಡ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುಬ್ಬಳ್ಳಿ ಶಹರ ವಲಯ ಇವುಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮಯನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆರ್. ವಾಯ್. ಹೊಸಮನಿ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಎಮ್. ಫಡ್ನೇಶಿ, ಬಿಆರ್‌ಸಿ ಸಮನ್ವಯಾಧಿಕಾರಿ ಅನುಸೂಯ ಯಕ್ಕುಂಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶಿವಾನಂದ ಗುಂಡಾರ, ಎಸ್.ಎಂ. ಅಂಕಲಿ, ಎಸ್.ವ್ಹಿ. ಪಟ್ಟಣಶೆಟ್ಟಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.