Home ಜಿಲ್ಲೆ ಕಲಬುರಗಿ ಮಾದಕ ವಸ್ತುಗಳ ಹಾವಳಿ ತಡೆಗೆ ಯುವಕರು ಪೊಲೀಸರ ಶಕ್ತಿವರ್ಧಕರಾಗಬೇಕು:ಪೊಲೀಸ್ ಆಯುಕ್ತ ಶರಣಪ್ಪ

ಮಾದಕ ವಸ್ತುಗಳ ಹಾವಳಿ ತಡೆಗೆ ಯುವಕರು ಪೊಲೀಸರ ಶಕ್ತಿವರ್ಧಕರಾಗಬೇಕು:ಪೊಲೀಸ್ ಆಯುಕ್ತ ಶರಣಪ್ಪ

ಕಲಬುರಗಿ:ಜು.1: ಮಾದಕ ವಸ್ತುಗಳ ಅಕ್ರಮ ಸಾಗಾಟ ಹಾಗೂ ಮಾರಾಟದಂತಹ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ತಮ್ಮ ತಮ್ಮ ಪ್ರದೇಶಗಳಲ್ಲಿ ನಿಗಾ ವಹಿಸಿ, ಅಂತಹ ಪ್ರಕರಣಗಳ ಮಾಹಿತಿ ಪೆÇಲೀಸರಿಗೆ ನೀಡಿ ಉತ್ತಮ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಕಾರ್ಯನಿರ್ವಹಿಸುವ ಮೂಲಕ ಯುವಕರು ಪೆÇಲೀಸರೊಂದಿಗೆ ಕೈಜೋಡಿಸಿ ಪೊಲೀಸರಿಗೆ ಶಕ್ತಿವರ್ಧಕರಾಗಿ, ಮಾದಕ ವಸ್ತುಗಳ ಹಾವಳಿಯನ್ನು ತಡೆಯಲು ಮುಂದಾಗಬೇಕು ಎಂದು ಕಲಬುರಗಿ ನಗರ ಪೆÇಲೀಸ್ ಆಯುಕ್ತ ಶರಣಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಮಂಗಳವಾರದಂದು, ಶರಣಬಸವ ವಿಶ್ವವಿದ್ಯಾಲಯ ಹಾಗೂ ಕಲಬುರಗಿ ನಗರ ಪೆÇಲೀಸ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಅಂತರಾಷ್ಟ್ರೀಯ ಮಾದಕ ವಸ್ತು ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟುವ ಹೋರಾಟವನ್ನು ಕೇವಲ ಪೆÇಲೀಸ್ ಇಲಾಖೆ ಅಥವಾ ಭದ್ರತಾ ಸಂಸ್ಥೆಗಳು ಮಾತ್ರ ಯಶಸ್ವಿಯಾಗಿ ನಡೆಸಲು ಸಾಧ್ಯವಿಲ್ಲ. ಸಮಾಜ, ವಿಶೇಷವಾಗಿ ಯುವಜನತೆ, ಅಕ್ರಮ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟದ ಮೇಲೆ ನಿಗಾ ವಹಿಸಿ, ಅದನ್ನು ಪರಿಣಾಮಕಾರಿಯಾಗಿ ಮಟ್ಟಹಾಕುವಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.
“ನಿಮ್ಮ ಸುತ್ತಮುತ್ತ ಯಾವುದೇ ಕಾನೂನುಬಾಹಿರ ಚಟುವಟಿಕೆ ಕಂಡುಬಂದರೆ ತಕ್ಷಣವೇ ಪೆÇಲೀಸರಿಗೆ ಮಾಹಿತಿ ನೀಡಿ ಅಥವಾ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ಮಾಹಿತಿ ನೀಡುವವರ ಗುರುತನ್ನು ಸಂಪೂರ್ಣವಾಗಿ ಗೌಪ್ಯವಾಗಿಡಲಾಗುತ್ತದೆ,” ಎಂದು ಆಯುಕ್ತರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಕಿಕ್ಕಿರಿದು ನೆರೆದಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸಮಾಜದ ಬೇರುಗಳನ್ನೇ ಕಿತ್ತುಹಾಕುತ್ತಿರುವ ಮಾದಕ ವಸ್ತುಗಳ ಹಾವಳಿಯನ್ನು ತಡೆಯುವ ಮಹತ್ತರ ಜವಾಬ್ದಾರಿ ಯುವಜನರ ಮೇಲಿದೆ, ಜೀವನದ ಯುವ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ಬಲಿಯಾಗುವ ಯುವಕರು ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುವುದμÉ್ಟೀ ಅಲ್ಲದೆ, ಅವರ ಶಿಕ್ಷಣ ಹಾಗೂ ಕಲ್ಯಾಣಕ್ಕಾಗಿ ಅಪಾರ ಪ್ರಮಾಣದಲ್ಲಿ ಹೂಡಿಕೆ ಮಾಡಿರುವ ರಾಷ್ಟ್ರದ ಆರ್ಥಿಕತೆಗೂ ಭಾರೀ ನಷ್ಟ ಉಂಟುಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಮಾದಕ ವ್ಯಸನಿಗಳಲ್ಲಿ ಬಹುಪಾಲು ಜನರು 18 ರಿಂದ 35 ವರ್ಷ ವಯೋಮಾನದವರಾಗಿದ್ದು, ಇದು ದೇಶದ ಅಭಿವೃದ್ಧಿಗೆ ತಮ್ಮ ಜ್ಞಾನ, ಶಕ್ತಿ ಹಾಗೂ ಪ್ರತಿಭೆಯನ್ನು ಸಮರ್ಪಿಸಬೇಕಾದ ಅತ್ಯಂತ ಮಹತ್ವದ ವಯಸ್ಸಾಗಿದೆ. ಆದರೆ ವ್ಯಸನಕ್ಕೆ ಒಳಗಾಗುವ ಮೂಲಕ ಅವರು ತಮ್ಮಷ್ಟಕ್ಕೆ ತಾವೇ ಅಲ್ಲದೆ, ಕುಟುಂಬ, ಸಮಾಜ ಮತ್ತು ರಾಷ್ಟ್ರಕ್ಕೂ ನಷ್ಟ ಉಂಟುಮಾಡುತ್ತಿದ್ದಾರೆ ಎಂದು ಶರಣಪ್ಪ ಬೇಸರ ವ್ಯಕ್ತಪಡಿಸಿದರು.
ಮಾದಕ ವಸ್ತುಗಳ ಸೇವನೆ ಆರಂಭಿಸುವುದು ಸುಲಭವಾಗಿರಬಹುದು. ಆದರೆ ಅದರ ದುಶ್ಚಟದಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿದೆ ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು. ಕಲಬುರಗಿ ನಗರದಲ್ಲೇ ಎರಡು ವರ್ಷಗಳ ಹಿಂದೆ ಸುಮಾರು 50 ರಿಂದ 60 ಜನರಿದ್ದ ಮಾದಕ ವ್ಯಸನಿಗಳ ಸಂಖ್ಯೆ 2025ರಲ್ಲಿ 500ಕ್ಕೂ ಹೆಚ್ಚಾಗಿದ್ದು, ಪ್ರಸಕ್ತ ವರ್ಷದಲ್ಲಿಯೂ ಹೊಸದಾಗಿ 100ಕ್ಕೂ ಹೆಚ್ಚು ವ್ಯಸನಿಗಳು ಸೇರ್ಪಡೆಯಾಗಿದ್ದಾರೆ. ಈ ಆತಂಕಕಾರಿ ಬೆಳವಣಿಗೆಯನ್ನು ತಕ್ಷಣವೇ ನಿಯಂತ್ರಿಸುವ ತುರ್ತು ಅಗತ್ಯವಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಪೆÇಲೀಸ್ ಆಯುಕ್ತರಾದ ಯಲ್ಲಂದೂರು ಶಾಲು ಮಾತನಾಡಿದರು. ಬಳಿಕ, ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಹಾಗೂ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆಯವರು ಉದ್ಘಾಟಿಸಿ ಉದ್ದೇಶಿಸಿ ಮಾತನಾಡಿದ ರಾಜ್ಯಮಟ್ಟದ “ಅಂತರಾಷ್ಟ್ರೀಯ ಮಾದಕ ವಸ್ತು ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ವಿಡಿಯೊ ಮೂಲಕ ಸಭಿಕರೆಲ್ಲರೂ ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಲಕ್ಷ್ಮೀ ಪಾಟೀಲ ಮಕಾ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.