Home ಜಿಲ್ಲೆ ಕಲಬುರಗಿ ಆಳಂದ ತಾಲೂಕಿಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ಭೇಟಿ:ಜಲ ಮೂಲಗಳ ಪರಿಶೀಲನೆ

ಆಳಂದ ತಾಲೂಕಿಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ಭೇಟಿ:ಜಲ ಮೂಲಗಳ ಪರಿಶೀಲನೆ

ಕಲಬುರಗಿ,ಏ.2: ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಬೇಸಿಗೆ ಹಿನ್ನೆಲೆಯಲ್ಲಿ ಬುಧವಾರ ಆಳಂದ ತಾಲೂಕಿನ ವಿವಿಧ ಸಂಭಾವ್ಯ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಭೇಟಿ ನೀಡಿ ಜಲ ಮೂಲಗಳ ಪರಿಶೀಲಿಸಿದರು.

ತಾಲೂಕಿನ ವೈಜಾಪುರ, ಕಡಗಂಚಿ, ಖಾತ್ರಬಾದ್, ಸಾವಳೇಶ್ವರ, ಕಾಮನಹಳ್ಳಿ, ಸರಸಂಬಾ, ತಡಕಲ್ ಹಾಗೂ ಹಾಲತಡಕಲ್ ಗ್ರಾಮಗಳಿಗೆ ಭೇಟಿ ನಿಡಿ ಕುಡಿಯುವ ನೀರಿನ ಜಲಮೂಲಗಳ ತೆರೆದ ಬಾವಿ, ಕೊಳವೆ ಬಾವಿ ಪರಿಶೀಲಿಸಿದಲ್ಲದೆ ಸ್ಥಳೀಯ ಗ್ರಾಮಸ್ಥರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಅಹವಾಲು ಆಲಿಸಿದರು.

ಈ ಸಂದರ್ಭದಲ್ಕಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಎಲ್ಲಾ ರೀತಿಯ ಮುಂಜಾಗ್ರತೆ ಕೈಗೊಳ್ಳಬೇಕು. ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕೆಂದು ಸ್ಥಳದಲ್ಲಿದ್ದ ತಾಲೂಕಾ ಪಂಚಾಯತ್ ಇ.ಓ ಮಾನಪ್ಪ ಕಟ್ಟಿಮನಿ ಅವರಿಗೆ ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಸಂಗಮೇಶ, ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.