Home ಜಿಲ್ಲೆ ಅಕ್ರಮವಾಗಿ ಸಾಗಿಸುತ್ತಿದ್ದ 3.21 ಲಕ್ಷ ಮೌಲ್ಯದ ಪಡಿತರ ಅಕ್ಕಿ, ರಾಗಿ ವಶ

ಅಕ್ರಮವಾಗಿ ಸಾಗಿಸುತ್ತಿದ್ದ 3.21 ಲಕ್ಷ ಮೌಲ್ಯದ ಪಡಿತರ ಅಕ್ಕಿ, ರಾಗಿ ವಶ

ಹೊಸಪೇಟೆ.ಅ.21 ಜಿಲ್ಲೆಯಲ್ಲಿ ಅಕ್ರಮವಾಗಿ ದಾಸ್ತಾನು ಹಾಗೂ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ 3.21 ಲಕ್ಷ ರೂ ಮೌಲ್ಯದ 9,260 ಕೆ.ಜಿ. ಪಡಿತರ ಅಕ್ಕಿ ಮತ್ತು ರಾಗಿಯನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಟಿ.ಬಿ.ಡ್ಯಾಂ ಪೊಲೀಸ್ ಠಾಣೆ ಹಾಗೂ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 5,100 ಕೆ.ಜಿ. ಅಕ್ಕಿ ಹಾಗೂ 4,160 ಕೆ.ಜಿ. ರಾಗಿಯನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಆಹಾರ ಧಾನ್ಯಗಳ ಒಟ್ಟು ಮೌಲ್ಯ ರೂ.3,21,430 ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟಿ.ಬಿ. ಡ್ಯಾಂ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಲಾಖೆ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.