Home ಜಿಲ್ಲೆ ಹುಬ್ಬಳ್ಳಿ ಅಭಿವೃದ್ಧಿಯ ಬಜೆಟ್

ಅಭಿವೃದ್ಧಿಯ ಬಜೆಟ್


ಹುಬ್ಬಳ್ಳಿ,ಮಾ.೬: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ , ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ಧಾರವಾಡ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಚಿಕ್ಕತುಂಬಳ ಹೇಳಿದ್ದಾರೆ.


ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಸರ್ವರಿಗೂ ಸಮಪಾಲು ಎಂಬAತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ ನೀಡಿದ್ದು, ಇದೊಂದು ಉತ್ತಮ ಬಜೆಟ್ ಆಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ, ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಲಾಗಿದ್ದು, ಇದೊಂದು ಜನಪರ ಕಾಳಜಿಯ ಬಜೆಟ್ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.