Home ಜಿಲ್ಲೆ ಮಂಗಳೂರು ಅರಂತೋಡಿನಲ್ಲಿ ನಾಡಪ್ರಭು ಕೆಂಪೇಗೌಡರ ೫೧೭ನೇ ಜನ್ಮ ದಿನಾಚರಣೆಎಂ.ಮೀನಾಕ್ಷಿ ಗೌಡರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ಅರಂತೋಡಿನಲ್ಲಿ ನಾಡಪ್ರಭು ಕೆಂಪೇಗೌಡರ ೫೧೭ನೇ ಜನ್ಮ ದಿನಾಚರಣೆಎಂ.ಮೀನಾಕ್ಷಿ ಗೌಡರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ಸುಳ್ಯ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ, ಗೌಡರ ಯುವ ಸೇವಾ ಸಂಘ ಸುಳ್ಯ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು, ಅರಂತೋಡು ಗ್ರಾಮ ಗೌಡ ಸಮಿತಿ ಹಾಗೂ ಮಹಿಳಾ ಸಮಿತಿಗಳ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ ೫೧೭ ನೇ ಜನ್ಮದಿನಾಚರಣೆ ಅರಂತೋಡು ನೆಹರೂ ಸ್ಮಾರಕ ಪಿಯು ಕಾಲೇಜಿನಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿ ಮಾತನಾಡಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿದೆ. ಅವರು ನಿರ್ಮಿಸಿದ ಊರು ಸಾವಿರಾರು ಜನರಿಗೆ ಆಶ್ರಯ ನೀಡಿದೆ. ಅವರ ದೂರದೃಷ್ಟಿಯ ಆಶಯ ಮುಂದಿನ ಜನಾಂಗಕ್ಕೆ ದಾರಿದೀಪವಾಗಬೇಕು ಎಂದಯ ಗೇಳಿದರು.
ರಾಜ್ಯ ಕಾರ್ಮಿಕರ ಕನಿಷ್ಡ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೆಂಪೇಗೌಡರು ಬೆಂಗಳೂರಿನ ಸಮಗ್ರ ಅಭಿವೃದ್ದಿಯ ಜತೆಗೆ ಕುಡಿಯುವ ನೀರು ಕೆರೆಗಳ ಅಭಿವೃದ್ದಿ, ಪರಿಸರ ಸಂರಕ್ಷಣೆ, ಬೆಂಗಳೂರು ಇಂದಿಗೂ ವಿಶ್ವ ಮಟ್ಟದಲ್ಲಿ ಹೆಸರು ಗಳಿಸಿದೆ. ಈ ಹೆಸರನ್ನು ಮುಂದೆಯೂ ಉಳಿಸಿಕೊಂಡು ಹೋಗುವಂತಹ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಸಮಾರಂಭದಲ್ಲಿ ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಎಂ.ಮೀನಾಕ್ಷಿ ಗೌಡರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ದ.ಕ. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ, ಗ್ಯಾರಂಟಿ ಯೋಜನಾ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ಅರಂತೋಡು – ತೊಡಿಕಾನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಂಚಾಲಕ ಎ.ಸಿ.ವಸಂತ ಮುಖ್ಯ ಅತಿಥಿಗಳಾಗಿದ್ದರು.
ನಿವೃತ್ತ ಪ್ರೌಢಶಾಲಾ ಶಿಕ್ಷಕಿ ಚಂದ್ರಮತಿ ಕೆ. ಉಪನ್ಯಾಸ ನೀಡಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ, ತಹಸೀಲ್ದಾರ್ ಮಂಜುಳಾ ಎಂ., ಗೌಡರ ಯುವ ಸೇವಾ ಸಂಘದ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್., ಮುಖ್ಯ ಶಿಕ್ಷಕ ಸೋಮಶೇಖರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್ ಸ್ವಾಗತಿಸಿದರು. ದಿನೇಶ್ ಮಡಪ್ಪಾಡಿ ಮೀನಾಕ್ಷಿ ಗೌಡರ ಪರಿಚಯ ಮಾಡಿದರು. ಶಿಕ್ಷಕ ಕಿಶೋರ್ ಕುಮಾರ್ ಕಿರ್ಲಾಯ ಕಾರ್ಯಕ್ರಮ ನಿರೂಪಿಸಿದರು.